Sunday, April 7, 2024

ಪ್ರದೀಪ್ತ ಸಾಂಸ್ಕೃತಿಕ ಸಂಘದ ಉದ್ಘಾಟನೆ

ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯದ  ಪ್ರದೀಪ್ತ ಸಾಂಸ್ಕೃತಿಕ ಸಂಘವನ್ನು ಖ್ಯಾತ ಯಕ್ಷಗಾನ ಹಾಸ್ಯಕಲಾವಿದ ದಿನೇಶ್ ಕೊಡಪದವು ಇವರು ಉದ್ಘಾಟಿಸಿದರು. ನಿಜವಾದ ಸಂಸ್ಕೃತಿ, ಸಾಂಸ್ಕೃತಿಕ  ವೈಭವವನ್ನು ನೋಡಲು ಶ್ರೀರಾಮ ವಿದ್ಯಾಕೇಂದ್ರಕ್ಕೆ ಬರಬೇಕು ಎಂದವರು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ, ಶ್ರೀಮತಿ ಲಕ್ಷ್ಮಿ ರಘುರಾಜ್ ಹಾಗೂ ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಇವರು ಉಪಸ್ಥಿತರಿದ್ದರು. ಇದಾದ ಬಳಿಕ ‘ಕಾಲಯ ತಸ್ಮೈ  ನಮಃ’ ಎಂಬ ಶೀರ್ಷಿಕೆಯಡಿ ಅಂತಿಮ ಪದವಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...