Wednesday, October 18, 2023

ಮಧ್ವ ಪೇಜಾವರ ಮಠ: ಮಧ್ವ ನವಮಿ, ಗುರು ಸಂಸ್ಮರಣೆ, ಉಚಿತ ಕಣ್ಣು ತಪಾಸಣಾ ಶಿಬಿರ

Must read

ಬಂಟ್ವಾಳ: ಶ್ರೀ ಮಧ್ವ ನವಮಿ ಮತ್ತು ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಸ್ಮರಣಾರ್ಥ ಬಂಟ್ವಾಳ ತಾ. ಕಾವಳಪಡೂರು ಗ್ರಾಮದ ಮಧ್ವ ಪೇಜಾವರ ಮಠದಲ್ಲಿ ಶುಕ್ರವಾರ ಉಚಿತ ಕಣ್ಣು ತಪಾಸಣಾ ಶಿಬಿರ ಸಹಿತ ವಿವಿಧ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಮಠದ ವತಿಯಿಂದ ಬೆಳಗ್ಗೆ ವಾಯು ಸ್ತುತಿ ಹೋಮ, ಮಧ್ವ ನಾಮ ಸಂಕೀರ್ತನೆ, ಭಜನ ಸಂಕೀರ್ತನೆ ನಡೆಯಿತು.  ಐ ಮಿತ್ರ ಸುರತ್ಕಲ್ ಮತ್ತು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ಸೊಸೈಟಿ ಸಹಕಾರದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ  ನಡೆಯಿತು.
ಜ್ಯೋತಿಷ ವಿದ್ವಾನ್ ವೆಂಕಟರಮಣ ಮುಚ್ಚಿನ್ನಾಯ ಕಾರಿಂಜ ಅವರು ಕಾರ್ಯಕ್ರಮವನ್ನು  ಉದ್ಘಾಟಿಸಿದರು.
ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ತಾ.ಪಂ.ಸದಸ್ಯೆ ಧನಲಕ್ಷ್ಮೀ ಸಿ.ಬಂಗೇರ, ಕಾವಳಪಡೂರು ಪ್ರಾ.ಕೃ.ಸಹಕಾರಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು,, ಗ್ರಾ.ಪಂ.ಸದಸ್ಯರಾದ ಚಂದ್ರಶೇಖರ ಕರ್ಣ, ಭವಾನಿ ಶ್ರೀಧರ ಪೂಜಾರಿ, ಪ್ರಮುಖರಾದ ಸೂರ್ಯ ನಾರಾಯಣ ಭಟ್, ರಾಜ್ ಪ್ರಸಾದ್ ಆರಿಗ , ಚಂದ್ರಹಾಸ ಶೆಟ್ಟಿ, ಸತೀಶ ಶೆಟ್ಟಿ, ಪ್ರಕಾಶ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮಠದ ವ್ಯವಸ್ಥಾಪಕ ವಿದ್ವಾನ್ ರಾಘವೇಂದ್ರ ಭಟ್ ಮದ್ದಡ್ಕ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೊರೊನಾ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

More articles

Latest article