Friday, April 5, 2024

ಜ.10ರಂದು ಬಂಟ್ವಾಳ ಪ್ರಿಂಟರ್‍ಸ್ ಎಸೋಸಿಯೇಶನ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ ಮತ್ತು ವಾರ್ಷಿಕ ಮಹಾಸಭೆ

ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್‍ಸ್ ಎಸೋಸಿಯೇಶನ್ ಇದರ ವತಿಯಿಂದ 2019-20ರ  ಎಸ್‌ಎಸ್‌ಎಲ್ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಅಧಿಕ ಅಂಕ ಪಡೆದ ಎಸೋಸಿಯೇಶನಿನ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ ಮತ್ತು ಎಸೋಸಿಯೇಶನಿನ ವಾರ್ಷಿಕ ಮಹಾಸಭೆಯು ಜನವರಿ 10ರಂದು ಬೆಳಿಗ್ಗೆ ಬಿ.ಸಿ.ರೋಡಿನ ರಾಜರಾಜೇಶ್ವರಿ ಕಾಂಪ್ಲೆಕ್ಸ್‌ನಲ್ಲಿರುವ ಯೂನಿಕ್ ಎಜುಕೇರ್‌ನಲ್ಲಿ ನಡೆಯಲಿದೆ.
ಬಂಟ್ವಾಳ ತಾಲೂಕಿನಲ್ಲಿ ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇಕಡಾ 98 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಮಯ್ಯರಬೈಲಿನ ದುರ್ಗಾ ಪ್ರಿಂಟರ್‍ಸ್‌ನ ರಮೇಶರ ಪುತ್ರಿ ಚೈತ್ರಾಂಜಲಿ, ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 93 ಅಂಕ ಪಡೆದ ದರಿಬಾಗಿಲಿನ ಮಾಧವರವರ ಪುತ್ರಿ ಹರ್ಷಿತಾ ಮತ್ತು ಡಿಸ್ಟಿಂಕ್ಷನ್‌ನ ಪಡೆದ ಪಾಣೆಮಂಗಳೂರಿನ ತರುಣ್ ಪ್ರಿಂಟರ್‍ಸ್‌ನ ಕಾರ್ಮಿಕರಾದ ಅನ್ವರ್ ಅಬೂಬಕ್ಕರ್ ಮತ್ತು ಬೀಪಾತುಮ್ಮಾರವರ ಮಗಳಾದ ಹಫೀಫಾ ಸುನೈನಾ ಈ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾನಿಧಿಯನ್ನು ಪಡೆಯಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಎಸೋಸಿಯೇಶನ್ ಅಧ್ಯಕ್ಷ ಈಶ್ವರ ಕುಮಾರ್ ಭಟ್‌ರವರು ವಹಿಸಲಿದ್ದಾರೆ. ನಂತರ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯ ನಡೆಯಲಿದ್ದು ತಾಲೂಕಿನ ಎಲ್ಲಾ ಮುದ್ರಣ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಎಸೋಸಿಯೇಶನಿನ ಕಾರ್ಯದರ್ಶಿ ಯಾದವ ಅಗ್ರಬೈಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...