Saturday, April 6, 2024

ಗೃಹರಕ್ಷಕರ ಸೇವೆ ಶ್ಲಾಘನೀಯ: ಸಂತೋಷ್ ಪಾಟೀಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಕಲಬುರ್ಗಿ  ಜಿಲ್ಲಾ   ಗೃಹರಕ್ಷಕ ದಳದ ಸಮಾದೇಷ್ಟರಾದ  ಸಂತೋಷ್ ಪಾಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರ ಸೇವೆ ಶ್ಲಾಘನೀಯ ಹಾಗೂ ಸಮಾಜಮುಖಿ ಸೇವೆಗಳನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣೆ ಪಡೆ ಚೀಫ್ವಾರ್ಡನ್ ಡಾ|| ಮುರಲೀಮೋಹನ್ ಚೂಂತಾರು ಇವರು ಮಾತನಾಡಿ ಕಲಬುರ್ಗಿ ಜಿಲ್ಲಾ ಸಮಾದೇಷ್ಟರು ಉತ್ತಮ ಕಾರ್ಯ ನಿರ್ವಹಿಸುತ್ತಾರೆ ಮತ್ತು ಗೃಹರಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುತ್ತಾರೆ ಹಾಗೂ ನಮ್ಮ ಜಿಲ್ಲೆಗೆ ಭೇಟಿ ನೀಡಿರುವುದು ನಮಗೆ ತುಂಬಾ ಸಂತಸ ತಂದಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರವೀಣ್ ಜತಿನ್ ಹಾಗೂ ಕಛೇರಿ ಅಧೀಕ್ಷಕರಾದ  ರತ್ನಾಕರ್, ಪ್ರಥಮ ದರ್ಜೆ  ಸಹಾಯಕಿ  ಅನಿತಾ, ಹಾಗೂ ಹಿರಿಯ ಗೃಹರಕ್ಷಕರಾದ ಭಾಸ್ಕರ್, ರಮೇಶ್ ಭಂಡಾರಿ, ಸುನಿಲ್ ಕುಮಾರ್ ಹಾಗೂ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...