Sunday, April 14, 2024

ವಿಟ್ಲ: ಕಿಡಿಗೇಡಿಗಳಿಂದ ಎಸ್ ಡಿ ಪಿ ಐ ಕಚೇರಿಗೆ ಬೆಂಕಿ

ವಿಟ್ಲ: ವಿಟ್ಲ ವಲಯ ಎಸ್ ಡಿ ಪಿ ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.

ಸೋಮವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದ್ದು, ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ ಡಿ ಪಿ ಐ ಮುಖಂಡ ಕಲಂದರ್ ಪರ್ತಿಪ್ಪಾಡಿ ಹಾಗೂ ಶಾಕೀರ್ ಅಳಕೆಮಜಲು ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್ ಡಿ ಪಿ ಐ ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಪಕ್ಷವನ್ನು ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

More from the blog

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...