Wednesday, April 10, 2024

ವಿಟ್ಲ ಎಸ್ ಡಿ ಪಿ ಐ ಕಚೇರಿಗೆ ಬೆಂಕಿ ಹಚ್ಚಿದ ಘಟನೆ ಖಂಡಿಸಿ ಪ್ರತಿಭಟನೆ: ಬಿಜೆಪಿ-ಸಂಘ ಪರಿವಾರದ ಕೃತ್ಯ: ಎಸ್ ಡಿ ಪಿ ಐ 

ವಿಟ್ಲ: ಕಿಡಿಗೇಡಿಗಳು ವಿಟ್ಲ ಎಸ್ ಡಿ ಪಿ ಐ ಕಚೇರಿಗೆ ಬೆಂಕಿ ಹಚ್ಚಿದ ಘಟನೆಯನ್ನು ಖಂಡಿಸಿ ವಿಟ್ಲ ವಲಯ ಎಸ್ ಡಿ ಪಿ ಐ ವತಿಯಿಂದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಂಘಪರಿವಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ವಿಟ್ಲ ಪೊಲೀಸ್ ಠಾಣೆಗೆ ರ್ಯಾಲಿ ನಡೆಸಲು ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಬಂದ ವಿಟ್ಲ ಪೊಲೀಸರು ಪ್ರತಿಭಟನೆ ಹಿಂತೆಗೆಯುವಂತೆ ಮನವಿ ಮಾಡಿದರು. ಎಸೈ ರಾಜೇಶ್ ಕೆ.ವಿ ಅವರು ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿ ತಕ್ಷಣವೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು. 24 ಗಂಟೆಯೊಳಗಡೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಎಸ್ ಡಿ ಪಿ ಐ ಮುಖಂಡ ಖಲಂದರ್ ಪರ್ತಿಪ್ಪಾಡಿ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ಪಕ್ಷದ ಬೆಳವಣಿಗೆಯನ್ನು ಸಹಿಸಲಾಗದ ತಂಡದಿಂದ ಈ ಕೃತ್ಯ ನಡೆದಿದೆ.‌ ಇದರ ಹಿಂದೆ ಸಂಘಪರಿವಾರ ಬಿಜೆಪಿ ವಿವಿಧ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಕೃತ್ಯ ಎಸೆಗಿದ್ದಾರೆ ಎಂದು ದೂರಿದರು.

ಶಾಕೀರ್ ಅಳಕೆಮಜಲ ಶಾಕೀರ್ ಅಳಕೆಮಜಲು ಮಾತನಾಡಿ ಈ ಕೃತ್ಯದ ಹಿಂದೆ ಸಂಘಪರಿವಾರ ಬಿಜೆಪಿ ಇರುವುದು ಖಚಿತವಿದೆ. ಪಕ್ಷವನ್ನು ದಮನಿಸಲು ಬೆಂಕಿ ಅಥವಾ ಬೇರೇನು ನಡೆಸಿದರೂ ಎಸ್ ಡಿ ಪಿ ಐ ಜಗ್ಗುವುದಿಲ್ಲ. ಬಿಜೆಪಿಯ ಕೆಲವು ನಾಯಕರ ಪ್ರಚೋದಕಾರಿ ಹೇಳಿಕೆಗಳಿಂದ ಇಂತಹ ಕೃತ್ಯಗಳು ನಡೆಯುತ್ತಿದೆ ಎಂದರು.

ಪುತ್ತೂರು ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ, ಅಝೀಜ್ ಕಡಂಬು ರಹೀಂ ವಿಟ್ಲ, ರಫೀಕ್ ಪೊನ್ನೋಟ್ಟು ಮೊದಲಾದವರು ಭಾಗವಹಿಸಿದ್ದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...