ಬಂಟ್ವಾಳ: ಬಂಟ್ವಾಳ ತಾ. ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಜೆಸಿಐ ಬಂಟ್ವಾಳ, ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್, ನಯನಾಡು ಶ್ರೀ ರಾಮ ಯುವಕ ಸಂಘ ಇದರ ಸಹಕಾರದಲ್ಲಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ, ದೇರಳಕಟ್ಟೆ ಜ.ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಜ.24 ರಂದು ನಡೆಯಲಿದೆ.
ಯೋಧ ಮುರಳಿ ಶೆಣೈ ಅವರು ಕಾರ್ಯಕ್ರಮ ಉದ್ಘಾಟಿಸಲಿರುವರು. ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣ ಕುಮಾರ್ ಪೂಂಜ ಅಧ್ಯಕ್ಷತೆ ವಹಿಸಲಿರುವರು.ಹಾಗೂ ಗಣ್ಯಅತಿಥಿಗಳು ಭಾಗವಹಿಸಲಿರುವರು ಎಂದು ಸಮಿತಿ ಅಧ್ಯಕ್ಷ ಡಾ. ರಾಮಕೃಷ್ಣ ಎಸ್. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


