ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಅಮೃತೇಶ್ವರ ದೇವಸ್ಥಾನ, ವಾಮಂಜೂರು, ತಿರುವೈಲು ಇಲ್ಲಿ ಬೆಳಿಗ್ಗೆ 7.00 ಗಂಟೆಯಿಂದ 9.00 ಗಂಟೆಯವರೆಗೆ ಸ್ವಚ್ಚತಾ ಕಾರ್ಯಕ್ರಮ ಹಾಗೂ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಇವರು ಮಾತನಾಡಿ ಪರಿಸರದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಎಂದರು.



ನಿಷ್ಕ್ರಾಮ ಸೇವೆ ಸಲ್ಲಿಸುವ ಗೃಹರಕ್ಷಕರು ಸ್ವಚ್ಚತಾ ಅಂದೋಲನದಲ್ಲಿ ಕೈ ಜೋಡಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ನುಡಿದರು. ಜನವರಿ ಮೂರನೇ ವಾರದಲ್ಲಿ ನಡೆಯುವ ವಷರ್ಾವಧಿ ಜಾತ್ರೆಯ ಹಿನ್ನೆಲೆಯಲ್ಲಿ ಈ ಸ್ವಚ್ಚತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು. ದೇವಸ್ಥಾನದ ಮುಖ್ಯ ಅರ್ಚಕರಾದ ಬಾಲಕೃಷ್ಣ ಭಟ್, ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಗೃಹರಕ್ಷಕರುಗಳಾದ ಸುನಿಲ್, ರಮೇಶ್ ಭಂಡಾರಿ, ಮಹೇಶ್, ದಿವಾಕರ, ದುಷ್ಯಂತ್, ಶುಭ, ಉಷಾ, ದಿವ್ಯಾ, ಜಯಂತಿ, ಮುಂತಾದವರು ಉಪಸ್ಥಿತರಿದ್ದರು. ಸುಮಾರು 25 ಮಂದಿ ಗೃಹರಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.