Monday, April 15, 2024

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸಾಮೂಹಿಕ ವಿವಾಹಕ್ಕೆ ನೊಂದಾವಣೆ

ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿದ್ದು 37ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 13ನೇ ವರ್ಷದ  ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದ್ದು, ಅರ್ಹ ವಧು-ವರರ ನೊಂದಾವಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.25ರಂದು   ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು  ವಧು-ವರರ ನೊಂದಾವಣೆಗೆ ಫೆ. 28 ಕೊನೆಯ ದಿನಾಂಕವಾಗಿದೆ.

ಆಸಕ್ತ ವಧು-ವರರು ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಛೇರಿಯಲ್ಲಿ ಸಂಪರ್ಕಿಸಬಹುದು. ವಿವಾಹವಾಗುವ ವಧುವಿಗೆ ಚಿನ್ನದ ತಾಳಿ ಹಾಗೂ ವಧು-ವರರಿಗೆ ಮಂಗಳ ವಸ್ತ್ರ  ನೀಡಲಾಗುವುದು. ಹಾಗೂ ಸರಕಾರದ ವತಿಯಿಂದ ಪ್ರತೀ ಜೋಡಿಯ ಖಾತೆಗೆ 50 ಸಾವಿರ ರೂ. ನೀಡಲಾಗುವುದು. ಅನಾಥ, ಬಡ ಕುಟುಂಬದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಎ.25 ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಮತ್ತು ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...