ಬಂಟ್ವಾಳ: ಭಾರತದ ವಿಜ್ಞಾನಿಗಳ ಮೇಲಿನ ಭರವಸೆಯಿಂದ ಇತರ ದೇಶಗಳಿಂದಲೂ ವ್ಯಾಕ್ಸಿನ್ ಬೇಡಿಕೆ ಬಂದಿರುವುದು ಹೆಮ್ಮೆಯ ವಿಷಯ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.



ಅವರು ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ವಿರೋಧಿ ಲಸಿಕೆ ವಿತರಣೆಗೆ ಚಾಲನೆ ನೀಡಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತ ದೇಶದಲ್ಲಿ ಪ್ರತಿಯೊಬ್ಬರೂ ನಿರ್ಭಯವಾಗಿ ರೋಗದ ವಿರುದ್ಧ ಹೋರಾಟ ಮಾಡಿದ್ದಾರೆ.
ಪ್ರಧಾನಿಯವರ ದಿಟ್ಟ ಹೆಜ್ಜೆಯ ಮೂಲಕ ದೇಶದಲ್ಲಿ ವ್ಯಾಕ್ಸಿನ್ ಶೀಘ್ರವಾಗಿ ಆರೋಗ್ಯ ಇಲಾಖೆಯ ಮೂಲಕ ಜನರಿಗೆ ತಲುಪಿದೆ ಇದು ಅತ್ಯಂತ ಸಂತೋಷದ ವಿಚಾರ.
ಕೊರೊನಾ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳಿಗೆ ವಿಶೇಷವಾದ ಧನ್ಯವಾದ ಸಲ್ಲಿಸಿದರು.
ವ್ಯಾಕ್ಸಿನ್ ಬಗ್ಗೆ ಯಾವುದೇ ಸಂದೇಹ ಬೇಡ ಎಂಬ ವಿಶ್ವಾಸದ ಮಾತುಗಳನ್ನು ಅವರು ಮಾತನಾಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ ಗಣೇಶ್ ಅವರಿಗೆ ಪ್ರಥಮವಾಗಿ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ತಹಶೀಲ್ದಾರ್ ರಶ್ಮಿ.ಎಸ್ ಆರ್,ತಾ.ಪಂ.ಇ.ಒ.ರಾಜಣ್ಣ, ವಿಟ್ಲ ಸಿ.ಡಿ.ಪಿ.ಒ.ಸುಧಾ ಜೋಶಿ, ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ, ಬಿ.ಒ.ಜ್ಞಾನೇಶ್ , ಶಿಕ್ಷಣ ಸಂಯೋಜಕಿ ಸುಜಾತ, ವೈದ್ಯಾಧಿಕಾರಿ ಪುಷ್ಪಲತಾ, ಡಾl ಸೌಮ್ಯ, ಎ.ಎಸ್.ಐ.ಜಿನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ವೈದ್ಯಾಧಿಕಾರಿ ಡಾl ದೀಪಾ ಪ್ರಭು ಪ್ರಾಸ್ತಾವಿಕ ಮಾತನಾಡಿದ ಬಳಿಕ ಅತಿಥಿಗಳನ್ನು ಸ್ವಾಗತಿಸಿದರು.
ಸುರೇಶ್ ಪರ್ಕಳ ಕಾರ್ಯಕ್ರಮ ನಿರೂಪಿಸಿದರು.