ನವದೆಹಲಿ: ದೇಶದಾದ್ಯಂತ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ದೆಹಲಿಯಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು ಈ ವಿಷಯ ಹೇಳಿದ್ದಾರೆ.
‘ದೆಹಲಿಯಲ್ಲಿ ಮಾತ್ರವಲ್ಲ. ಲಸಿಕೆ ಇಡೀ ದೇಶದಲ್ಲಿ ಉಚಿತವಾಗಿ ವಿತರಿಸಲಾಗುವುದು’ ಎಂದು ಅವರು ಹೇಳಿದ್ದಾರೆ. ‘ಮೊದಲ ಹಂತದಲ್ಲಿ 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಕರ್ತವ್ಯದಲ್ಲಿ ಮುಂಚೂಣಿಯಲ್ಲಿರುವ 2 ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. 27 ಕೋಟಿ ಆದ್ಯತೆಯ ಫಲಾನುಭವಿಗಳಿಗೆ ಜುಲೈ ಒಳಗಾಗಿ ಹೇಗೆ ಲಸಿಕೆ ವಿತರಣೆ ಮಾಡಬೇಕು ಎಂಬ ಬಗ್ಗೆ ಯೋಜನೆ ಅಂತಿಮಗೊಳಿಸಲಾಗುವುದು’ ಎಂದು ಸಚಿವರು ತಿಳಿಸಿದ್ದಾರೆ.
In 1st phase of #COVID19Vaccination free #vaccine shall be provided across the nation to most prioritised beneficiaries that incl 1 crore healthcare & 2 crore frontline workers
Details of how further 27 cr priority beneficiaries are to be vaccinated until July are being finalised pic.twitter.com/K7NrzGrgk3— Dr Harsh Vardhan (@drharshvardhan) January 2, 2021