ವಿಟ್ಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಹದಿಹರೆಯರ ಆರೋಗ್ಯ ದಿನಾಚರಣೆ ಕಾರ್ಯಕ್ರಮ ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.
ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಅಧ್ಯಕ್ಷತೆ ವಹಿಸಿದ್ದರು.
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕಿ ಕುಸುಮಾ, ಕಿರಿಯ ಆರೋಗ್ಯ ಸಹಾಯಕಿ ಚಂದ್ರಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಆರ್‌ಕೆಎಸ್‌ಕೆ ಕೌನ್ಸಿಲರ್ ಶ್ರುತಿ ಭಾಗವಹಿಸಿದ್ದರು.
ಈ ಕಾಯಕ್ರಮದಲ್ಲಿ ಶಾಲಾ ಶಿಕ್ಷಕ ಮತ್ತು ಶಿಕ್ಷಕಿಯರು ಭಾಗವಹಿಸಿದ್ದರು. ವಾರಿಜ ಸ್ವಾಗತಿಸಿದರು. ಹರಿಣಾಕ್ಷಿ ವಂದಿಸಿದರು. ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.