ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಇಲ್ಲಿನ ಒಕ್ಕೆತ್ತೂರು ಸಮೀಪದ ಕೊಡಂಗೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಹಗಲಿರುಳು ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ವಿಜೇತ ಸದಸ್ಯರಿಗೆ ಮತ್ತು ಮತದಾರ ಬಂಧುಗಳಿಗೆ ಅಭಿನಂದನಾ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಹಾಗೆ ಈ ಕುರಿತು ಈ ಬಾರಿಯ ಗ್ರಾಮ ಪಂಚಾಯತು ಚುನಾವಣೆಯಲ್ಲಿ ರಾಜ್ಯದಲ್ಲಿ 32 ಸಾವಿರಕ್ಕೂ ಅಧಿಕ ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿದ್ದಾರೆ.
ಮುಂಬರುವ ತಾಲೂಕು ಪಂಚಾಯತು ಮತ್ತು ಜಿಲ್ಲಾ ಪಂಚಾಯತು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಮ್.ಎಸ್.ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಜಯಂತಿ ವಿ ಪೂಜಾರಿ, ಕೊಳ್ನಾಡು ಗ್ರಾ.ಪಂ. ಮಾಜಿ ಅದ್ಯಕ್ಷ ಸುಭಾಶ್ ಶೆಟ್ಟಿ ಕೊಳ್ನಾಡು, ರಘು ಪೂಜಾರಿ, ಎಂ.ಕೆ ಮೂಸ. ಸದಸ್ಯೆ ಶ್ರೀಮತಿ ಶೋಭಾ ರೈ, ವಿಟ್ಲ ಪಟ್ಟಣ ಪಂಚಾಯತು ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.