Saturday, April 6, 2024

ಫೆ.ಅಂತ್ಯದೊಳಗೆ ಕಾಮಗಾರಿಗಳನ್ನು ಮುಗಿಸಿ : ಅಧಿಕಾರಿಗಳಿಗೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಸೂಚನೆ

ಬಂಟ್ವಾಳ: ತಾ.ಪಂ.ನಿಂದ ಬಿಡುಗೆಯಾದ ಕೋಟಿ ಅನುದಾನಗಳ ಕಾಮಗಾರಿಗಳು ಫೆ.ಅಂತ್ಯದೊಳಗೆ ಮುಗಿಸುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧಿಕಾರಿಗಳಿಗೆ ಸೂಚಿಸಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷ ತೆಯಲ್ಲಿ ತಾ.ಪಂ.ನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಸೂಚಿಸಿದರು.

ಕಾರ್ಮಿಕ ಇಲಾಖೆಯಿಂದ ಸಿಗುವ ಪಿಂಚಣಿ ಯೋಜನೆ ಸರಿಯಾಗಿ ಫಲಾನುಗಳಿಗೆ ಸಿಗುವಂತಾಗಲು ಪ್ರತಿ ಗ್ರಾಮ ಪಂಚಾಯಗಳಿಗೆ ಅಧಿಕಾರಿಗಳು ತೆರಳಿ ಸರಿಯಾಗಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಅಧ್ಯಕ್ಷ ರು ಸೂಚಿಸಿದರು.

ಸರಕಾರದ ವಿವಿಧ ಮಾಸಶನಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎಂಬ ಅನೇಕ ಫಲಾನುಭವಿಗಳ ದೂರುಗಳು ಬಂದಿದ್ದು ಈ ಬಗ್ಗೆ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದ ತಾ.ಪಂ ಅಧ್ಯಕ್ಷ ರು ಈ ಬಗ್ಗೆ ಕ್ರಮಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಬಳಿಕ ತಾಲೂಕಿನ ಎಲ್ಲಾ ಹಾಸ್ಟೆಲ್ ಗಳು ಶುರುವಾಗಿದೆ ಎಂದು ಸಮಾಜ ಕಲ್ಯಾಣ ಅಧಿಕಾರಿ ಸಭೆಯಲ್ಲಿ ತಿಳಿಸಿದರು.
ಮೆಸ್ಕಾಂ ಇಲಾಖೆ ಸಭೆಯಲ್ಲಿ ಗೈರು ಹಾಜರಾಗಿದ್ದ ಬಗ್ಗೆ ಗರಂ ಆದ ಆದ್ಯಕ್ಷರು
ಶಿಕ್ಷಣ ಇಲಾಖೆ, ಕೃಷಿ ಇಲಾಖೆ ಸಹಿತ ಅನೇಕ ಇಲಾಖೆ ಮಾಸಿಕ ಕೆಡಿಪಿ ಸಭೆಯ ರಿಪೋರ್ಟ್ ಕೊಟ್ಟಿಲ್ಲ ಯಾಕೆ ಎಂದು ಸಭೆಯಲ್ಲಿ ಪ್ರಶ್ನಿಸಿದರು.
ಟಾರ್ಗೆಟ್ ತಕ್ಕಂತೆ ಅನುದಾನ ಬಿಡುಗಡೆಯಾದ ಹಣವನ್ನು ನಿಗದಿತ ಅವದಿಯಲ್ಲಿ ಖರ್ಚು ಮಾಡಿ ಕಾಮಗಾರಿಯನ್ನು ಮುಗಿಸುವಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸುವಂತೆ ತಾ.ಪಂ.ಇ.ಒ.ರಾಜಣ್ಣ ತಿಳಿಸಿದರು.
ಉಪಾಧ್ಯಕ್ಷ ಅಬ್ಬಾಸ್ ಆಲಿ ಸಭೆಯಲ್ಲಿ ಮಾತನಾಡಿ ಖಾಸಗಿ ಶಾಲೆಗಳ ದಾಖಲಾತಿ ಸಂದರ್ಭ ಪಡಯುವ ಸುಲ್ಕದಲ್ಲಿ 30 / ರಿಯಾತಿ ನೀಡಿದೆ ಆದರೆ ಕೆಲವು ಶಾಲೆಗಳಲ್ಲಿ ರಿಯಾತಿ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು ಎಲ್ಲಾ ಶಾಲೆಗಳಲ್ಲಿ ಸರಕಾರದ ಆದೇಶಗಳು ಅನುಷ್ಠಾನ ಮಾಡುವಂತೆ ಶಿಕ್ಷಣ ಇಲಾಖೆಯ ಬಿ.ಇ.ಒ.ಜ್ಞಾನೇಶ್ ಗೆ ತಿಳಿಸಿದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...