Friday, April 5, 2024

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಚಿತ್ರ : ವಿಕೇಶ್ ಬಂಟ್ವಾಳ 

ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಮಂಗಳೂರು ಕೆಎಂಸಿ ಆಸ್ಪತ್ರೆ, ವೆನ್‌ಲಾಕ್ ಆಸ್ಪತ್ರೆ, ಎ.ಜೆ.ಆಸ್ಪತ್ರೆ, ರೆಡ್‌ಕ್ರಾಸ್ ಮಂಗಳೂರು ಹಾಗೂ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.

ಭಜರಂಗದಳ ಪ್ರಾಂತ ಸಂಚಾಲಕ ರಘು ಸಕಲೇಶಪುರ ಅವರು ಶಿಬಿರವನ್ನು ಉದ್ಘಾಟಿಸಿದರು. ಉಡುಪಿ ಕ್ಷತ್ರೀಯ ಪೀಠದ ಶ್ರೀ ವಿಶ್ವಾಧಿರಾಜ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ| ಕೃಷ್ಣಪ್ರಸನ್ನ ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್                        ಉಳಿಪ್ಪಾಡಿಗುತ್ತು,  ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ದಿ ಮೈಸೂರು ಎಲೆಕ್ಟ್ರಿಕಲ್ಇಂಡಸ್ಟ್ರೀಸ್ ಅಧ್ಯಕ್ಷ ಸಂತೋಷ್‌ಕುಮಾರ್ ರೈ, ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ಆರ್‌ಎಸ್‌ಎಸ್ ಕಾರ್ಯವಾಹ ವಿನೋದ್ ಕೊಡ್ಮಾಣ್, ವಿಹಿಂಪ ಕಾರ್ಯದರ್ಶಿ ಶರಣ್ ಪಂಪುವೆಲ್, ಪ್ರಾಂತ ಸಹ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಸಂಚಾಲಕ ಭುಜಂಗ ಕುಲಾಲ್, ವಿಹಿಂಪ ಕಾರ್ಯದರ್ಶಿ ಸತೀಶ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಬಿ.ಪದ್ಮನಾಭ, ಕಾರ್ಯದರ್ಶಿ ಸುರೇಶ್ ಸಾಲ್ಯಾನ್, ಬಜರಂಗ ದಳ ಬಂಟ್ವಾಳ ಸಂಚಾಲಕ ಶಿವಪ್ರಸಾದ್ ತುಂಬೆ, ಬಜರಂಗ ದಳ ಜಿಲ್ಲಾ ಸಹಸಂಯೋಜಕರಾದ ಭರತ್ ಕುಮ್ಡೇಲು, ಗುರುರಾಜ್ ಬಂಟ್ವಾಳ, ವೆನ್‌ಲಾಕ್ ಆಸ್ಪತ್ರೆಯ ಡಾ| ಶರತ್‌ಕುಮಾರ್ ರಾವ್, ಎಜೆ ಆಸ್ಪತ್ರೆಯ ಡಾ| ಪ್ರಶಾಂತ್ ಮಾರ್ಲ, ಡಾ| ಸುಧೀರ್ಹೆಗ್ಡೆ, ಸುಭಾಶ್ಚಂದ್ರ ಜೈನ್, ತಾ.ಪಂ.ಸದಸ್ಯ ಗಣೇಶ್ ಸುವರ್ಣ, ಯಶವಂತ ದೇರಾಜೆ, ದುರ್ಗಾಪ್ರಸಾದ್ ಶೆಟ್ಟಿ, ಭುವನೇಶ್ ಪಚ್ಚಿನಡ್ಕ, ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್, ಪ್ರಮೋದ್‌ಕುಮಾರ್ ರೈ, ವಿಹಿಂಪ ಜಿಲ್ಲಾ ಸೇವಾ ಪ್ರಮುಖ್ ನರಸಿಂಹ ಪೂಂಜ, ಜಿಲ್ಲಾ ಮಠ ಮಂದಿರ ಪ್ರಮುಖ್ ಅರುಣ್‌ಕುಮಾರ್ ಶೆಟ್ಟಿ ನುಳಿಯಾಲುಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಹಿಂಜಾವೇಯ ತಿರುಲೇಶ್ ಬೆಳ್ಳೂರು, ಚಂದ್ರ ಕಲಾಯಿ, ಶೇಖರ ಶೆಟ್ಟಿ ಅಮ್ಟಾಡಿ, ದಾಮೋದರ ನೆತ್ತರಕೆರೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ| ಭಾಮಿ ಸದಾಶಿವ ಶೆಣೈ, ನ್ಯಾಯವಾದಿ ಪ್ರಸಾದ್ ರೈ, ವಿಹಿಂಪ ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ವಿಹಿಂಪ-ಭಜರಂಗದಳ  ಬಂಟ್ವಾಳ ಪ್ರಖಂಡದ ಕಳೆದ ಅವಧಿಯ ಹಾಗೂ ಹಾಲಿ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಸರಪಾಡಿ ಅಶೋಕ ಶೆಟ್ಟಿ ಸ್ವಾಗತಿಸಿದರು. ಧರ್ಮ ಪ್ರಸರಣ ಪ್ರಮುಖ್ ರಾಜಾರಾಮ್ ನಾಯಕ್ ವಂದಿಸಿದರು. ಎಚ್ಕೆ ನಯನಾಡು ಕಾರ್ಯಕ್ರಮ ನಿರ್ವಹಿಸಿದರು. ಶಿಬಿರದಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ರಕ್ತದಾನ ಮಾಡಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...