ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಜಯಗಳಿಸಲು ಕಾರಣಿಕರ್ಥರಾದ ಕಾರ್ಯಕರ್ತರಿಗೆ, ಮತದಾರ ಬಾಂಧವರಿಗೆ, ನೂತನವಾಗಿ ಚುನಾಯಿತರಾದ ಸದಸ್ಯರುಗಳಿಗೆ ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವವು ನಡೆಯಿತು.



ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ತಾಲೂಕಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಭರವಸೆ ನೀಡಿದ ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಈಶ್ರಪ್ಪನವರು, ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವ ಆಶ್ವಾಸನೆ ನೀಡಿದ ಸಚಿವ ದ್ವಯರಾದ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂದರು ಮತ್ತು ಮೀನುಗಾರಿಕಾ ಸಚಿವರಾದ ಎಸ್ ಅಂಗಾರ ಹಾಗೂ ಶಾಸಕ ಹರೀಶ್ ಪೂಂಜಾ ಸೇರಿದಂತೆ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.