Saturday, April 13, 2024

ಕ್ಯಾನ್ಸರ್ ಚಿಕಿತ್ಸೆಗೆ ಸ್ಪಂದಿಸುತ್ತದೆ :- ಡಾ|| ಚೂಂತಾರು

ಹೆಚ್ಚಿನ ಎಲ್ಲಾ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಮಾರಣಾಂತಿಕ ರೋಗಗಳ ಪಟ್ಟಿಯಲ್ಲಿ ಹೃದಯಘಾತದ ನಂತರದ ಎರಡನೇ ಸ್ಥಾನಪಡೆದಿದೆ. ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಕ್ಯಾನ್ಸರ್ ರೋಗ ಬಂದವರೆಲ್ಲ ಸಾಯುವುದಿಲ್ಲ. ಹೆಚ್ಚಿನ ಎಲ್ಲಾ ಕ್ಯಾನ್ಸರ್‌ಗಳು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತದೆ ಎಂದು ಡಾ|| ಮುರಲಿ ಮೋಹನ ಚೂಂತಾರು ಅಭಿಪ್ರಾಯ ಪಟ್ಟರು.
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವಿಶ್ವ ಕ್ಯಾನ್ಸರ್ ತಿಳುವಳಿಕಾ ದಿನ ಇದರ ಅಂಗವಾಗಿ ಉಚಿತ ಕ್ಯಾನ್ಸರ್ ಮಾಹಿತಿ ಶಿಬಿರ ಇಂದು  ಬೆಳಗ್ಗೆ 10 ರಿಂದ  ನಡೆಯಿತು. ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಕ್ಯಾನ್ಸರ್ ಬಗ್ಗೆ ಮಾಹಿತಿ ಇರುವ ಕರಪತ್ರ ಹಂಚಲಾಯಿತು ಮತ್ತು ಅರಿವು ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕವನ್ನು ಉಚಿತವಾಗಿ ನೀಡಲಾಯಿತು. ಶ್ರೀ ಗುಣಾಜೆ ಉದಯಶಂಕರ್ ಭಟ್ ಇವರಿಗೆ ಪುಸ್ತಕ ಮತ್ತು ಕರಪತ್ರ ಹಂಚುವುದರ ಮುಖಾಂತರ ಈ ಶಿಬಿರಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಡಾ|| ರಾಜಶ್ರೀ ಮೋಹನ್, ಡಾ|| ನೇಹಾ ವಿಕಾಸ್ ಚಿಕಿತ್ಸಾಲಯದ ಶುಶ್ರೂಶಕಿಯರಾದ ಶ್ವೇತ, ಚೈತ್ರ, ರಮ್ಯ ಮತ್ತು ಸುಶ್ಮಿತಾ ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...