ಬಂಟ್ವಾಳ: ಬೆಂಗಳೂರು ಮಂಗಳೂರು ರಾಷ್ಟೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆಯಿಂದ ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಹೊರಟಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆಯಿಂದ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು ಸ್ಥಳೀಯವಾಗಿ ಹೆಚ್ಚಿನ ನಿಗಾ ವಹಿಸಲಾಗಿದೆ.
*ಸಂಚಾರಕ್ಕೆ ಅಡ್ಡಿ:*
ಟ್ಯಾಂಕರ್ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಬೆಂಗಳೂರಿಗೆ ತೆರಳುವ ವಾಹನಗಳಿಗೆ ಮಾಣಿ – ಮೈಸೂರು ರಸ್ತೆಯಲ್ಲಿ ಸಂಚಾರ ಮಾಡುವಂತೆ ಪೋಲೀಸರು ತಿಳಿಸಿದ್ದಾರೆ.
*ಒಂದೇ ವಾರದಲಿ ಮೂರು ಘಟನೆ*
ಒಂದು ವಾರದಲ್ಲಿ ಮೂರು ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಚಾಲಕರ ನಿರ್ಲಕ್ಷ್ಯ ತನದ ಚಾಲನೆಯೇ ಕಾರಣವೆನ್ನಲಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಸಾರ್ವಜನಿಕ ವಲಯದಲ್ಲಿ ಆತಂಕ ಉಂಟಾಗಿದೆ.