Saturday, April 6, 2024

*ವಿದೇಶದಿಂದ ಬರುವವರಿಗೆ 14 ದಿನ ಹೋಂ ಕ್ವಾರಂಟೈನ್‌ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರ*

ಬಂಟ್ವಾಳ ಫೆ.22 : ಇತರ ದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ತನ್ನ ಹಿಂದಿನ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದು ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ಅನ್ನು ಕಡ್ಡಾಯಗೊಳಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ.

ಮೂಲ ಹಂತದಲ್ಲಿ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್‌ ವರದಿ ಇಲ್ಲದೆ ವಿಮಾನವೇರಲು ಅವಕಾಶವಿಲ್ಲದಿದ್ದರೂ, ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಅವರನ್ನು ಮತ್ತೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ಯು.ಕೆ., ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸುವವರು ತಮ್ಮಗೆ ಆರ್‌ಟಿ-ಪಿಸಿಆರ್ ನೆಗೆಟಿವ್‌ ವರದಿ ಇಲ್ಲದೆ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅವಕಾಶವಿಲ್ಲ. ಆದರೆ ಇತೆ ದೇಶಗಳಿಂದ ಬಂದ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ತಮ್ಮ ಮಾದರಿಗಳನ್ನು ನೀಡಿ ವಿಮಾನ ನಿಲ್ದಾಣದಿಂದ ನಿರ್ಗಮಿಸಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಶನಿವಾರ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೊರಡಿಸಿದೆ.

ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರು ತಮ್ಮ ಸರಿಯಾದ ವಸತಿ ವಿಳಾಸವನ್ನು ಕಡ್ಡಾಯವಾಗಿ ನೀಡಬೇಕು. ಪರೀಕ್ಷಾ ಫಲಿತಾಂಶಗಳನ್ನು ಅವರಿಗೆ ತಲುಪಿಸಲಾಗುತ್ತದೆ. ಆರ್‌ಟಿ-ಪಿಸಿಆರ್ ಜೊತೆಗೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ಆರ್‌ಟಿ-ಪಿಸಿಆರ್ ಪರೀಕ್ಷೆಯ ಆಯ್ಕೆಯೂ ಲಭ್ಯವಿದೆ. ಪರೀಕ್ಷೆಗಳ ವೆಚ್ಚವನ್ನು ಪ್ರಯಾಣಿಕರು ಭರಿಸಬೇಕಾಗುತ್ತದೆ. ಪಾಸಿಟಿವ್‌ ಆದಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು ಎಂದು ಸುತ್ತೋಲೆಗಳು ತಿಳಿಸಿವೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...