ಬಂಟ್ವಾಳ : ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಮಂಗಳೂರು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಹಾಗೂ ಸಮುದಾಯ ಸಂಸ್ಥೆ (ರಿ) ತುಮಕೂರು ಇವರ ಸಹಯೋಗದೊಂದಿಗೆ, ಜಲಜೀವನ್ ಮಿಷನ್ ( ಮನ ಮನೆಗೆ ಗಂಗೆ) ಮತ್ತು ಸ್ಚಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿ ಗ್ರಾಮ ಕ್ರಿಯಾ ಯೋಜನೆ ಕಾರ್ಯಕ್ರಮವು ಇರಾ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ನಡೆಯಿತು.
ಜಲಜೀವನ್ ಮಿಷನ್ ನ ಚರಣ್ ರಾಜ್ ರವರು ಶುದ್ಧ ನೀರಿನ ಉಪಯುಕ್ತತೆ ಹಾಗೂ ಕಲುಶಿತ ನೀರಿನಿಂದ ಉಂಟಾಗುವ ಆರೋಗ್ಯ ತೊಂದರೆಗಳನ್ನು ತಿಳಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಆಡಳಿತ ಅಧಿಕಾರಿ ಕೃಷ್ಣಮೂರ್ತಿ ಜಿ, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಪಂಚಾಯತ್ ಹಾಲಿ ಹಾಗೂ ಮಾಜಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಪು ಚಾಲಕರು,ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಕಾರ್ಯದರ್ಶಿ ನಳಿನಿ ಎ.ಕೆ ಧನ್ಯವಾದ ಸಲ್ಲಿಸಿದರು.