ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಟಾನ, ಜನತೆಯ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಿಕೊಳ್ಳುವುದು ಮತ್ತು ಪ್ರೋತ್ಸಾಹಿಸುವುದು, ಪಾರದರ್ಶಕತೆ ಒದಗಿಸುವುದು ಮತ್ತು ನಾಗರಿಕರಿಗೆ ಮಾಹಿತಿ ದೊರಕುವಂತೆ ಮಾಡುವುದು, ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ತಾಲೂಕು ಪಂಚಾಯತ್‌ನ ಸ್ಪಂದನಶೀಲ ಆಡಳಿತವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2019-20 ನೇ ಸಾಲಿನ ತಾಲೂಕು ಪಂಚಾಯತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ–ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂದಿಯನ್ನು ಫೆ.9ನೇ ಮಂಗಳವಾರ ಪೂರ್ವಾಹ್ನ ಗಂಟೆ 11ಕ್ಕೆ ತಾಲೂಕು ಪಂಚಾಯತ್‌ನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ಮಾನ್ಯ ಸಹಾಯಕ ಕಾರ್ಯದರ್ಶಿಯವರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇವರ ಉಪಸ್ಥಿತಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಬಂಟ್ವಾಳ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ತಿಳಿಸಿದ್ದಾರೆ.



ತಾಲೂಕು ಪಂಚಾಯತ್, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅವರು ವಿನಂತಿಸಿದ್ದಾರೆ.