ಬೆಳ್ತಂಗಡಿ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆಯಲ್ಲಿ ಸೆರೆಯಾಗಿದೆ.
ಚಿರತೆಗೆ ಅರವಳಿಕೆಯನ್ನು ಗನ್ ಮೂಲಕ ಕೊಡಿಸಿ, ಬಳಿಕ ಬಲೆಯಲ್ಲಿ ಸೆರೆ ಹಿಡಿದು. ಬೋನಿನಲ್ಲಿ ಕೂಡಿ ಹಾಕಲಾಗಿದೆ.
ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸ್ಥಳೀಯರು ಪಾಲ್ಗೊಂಡಿದ್ದರು.
ಗಾಯಗೊಂಡಿರುವ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.