ಕಲ್ಲಡ್ಕ: ಬಂಟ್ವಾಳ ಫೆ.16 ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ‘ಶಕುಂತಲಾದೇವಿ’ ಗಣಿತ ಶಾಸ್ತ್ರ ಪ್ರಯೋಗಶಾಲೆಯ ಉದ್ಘಾಟನೆಯನ್ನು ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮಾಡಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕರಾದ ವಸಂತ ಮಾದವ, ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕವಿತಾ ಸ್ವಾಗತಿಸಿ ಹರ್ಷಿತಾ ವಂದಿಸಿ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.