Monday, April 8, 2024

ಕನ್ನಡ ಭವನ ಹಾಗೂ ಸಾರ್ವಜನಿಕ ರಂಗಮಂದಿರ ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ನಿರ್ಮಿಸಿದ ಕನ್ನಡ ಭವನ ಹಾಗೂ ಸಾರ್ವಜನಿಕ ರಂಗಮಂದಿರ ಲೋಕಾರ್ಪಣೆ ಶನಿವಾರ ಸೇರಿದ್ದ ಕನ್ನಡಾಭಿಮಾನಿಗಳ ಸಮ್ಮುಖ ನಡೆಯಿತು. ಇದರೊಂದಿಗೆ ಎರಡು ದಿನಗಳ ಕಾಲ ಬಿ.ಸಿ.ರೋಡಿನಲ್ಲಿ ನಡೆಯುವ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯೂ ದೊರಕಿತು. ಫೆ.21ರಂದು ಇದೇ ಜಾಗದಲ್ಲಿ ಬಂಟ್ವಾಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

 

ಆರಂಭದಲ್ಲಿ ಕನ್ನಡ ಭುವನೇಶ್ವರಿಯ ಮೆರವಣಿಗೆ ಬಿ.ಸಿ.ರೋಡಿನ ಕೈಕಂಬದಿಂದ ಕೈಕುಂಜೆವರೆಗೆ ನಡೆಯಿತು. ಜೋಡುಮಾರ್ಗ ಜೇಸಿ ಅಧ್ಯಕ್ಷ ಶೈಲಜಾ ರಾಜೇಶ್ ಭುವನೇಶ್ವರಿ ವೇಷಧಾರಿಯಾಗಿ ತೆರೆದ ಜೀಪಿನಲ್ಲಿ ಸಾಗಿ ಗಮನ ಸೆಳೆದರು. ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗ ಸಹಿತ ಚೆಂಡೆ, ಪಥ ಸಂಚಲನ ಮೆರವಣಿಗೆಯಲ್ಲಿ ಕಂಡುಬಂತು. ಮೆರವಣಿಗೆಗೆ ಪುರಸಭಾಧ್ಯಕ್ಷ ಮಹಮ್ಮದ್ ಶರೀಪ್ ಚಾಲನೆ ನೀಡಿದರು. ಮೊಡಂಕಾಪು ಇನ್ಫೆಂಟ್ ಜೀಸಸ್ ಧರ್ಮಗುರು ರೆ.ಫಾ.ವಲೇರಿಯನ್ ಡಿಸೋಜ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆಗೈದರು. ಮಿಥುನ್ ಮೊಡಂಕಾಪು, ಅಜಿತ್ ಪಾಣೆಮಂಗಳೂರು ನಿರ್ವಹಿಸಿದ ಮೆರವಣಿಗೆ ಕಾರ್ಯಕ್ರವನ್ನು ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ನಿರೂಪಿಸಿದರು.

ಬಳಿಕ ಕನ್ನಡ ಭವನ ಸಂಕೀರ್ಣದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕ ರಂಗಮಂದಿರವನ್ನು ಉದ್ಘಾಟಿಸಿ, ಆಶೀರ್ಚನ ನೀಡಿ ಕನ್ನಡ ಮತ್ತು ತುಳು ಈ ಜಿಲ್ಲೆಯ ಜನತೆಗೆ ಇಬ್ಬರು ತಾಯಿ ಇದ್ದ ಹಾಗೆ.ತುಳು ಭಾಷೆ 8 ಪರಿಚ್ಚೇದಕ್ಕೆ ಸೇರ್ಪಡೆಯ ಜೊತೆಗೆ ರಾಜ್ಯದಲ್ಲಿ ಪ್ರಾದೇಶಿಕ ಭಾಷೆಯಾಗಿ ಘೋಷಿಸಬೇಕು ಎಂಬುದು ಈ ಸಮ್ಮೇಳನದ ಧ್ಯೇಯವಾಗಬೇಕು ಎಂದರು. ಸುಜಾತಾ ಕುಮಾರಿ ಕೈಕುಂಜೆ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ತಹಶೀಲ್ದಾರ್ ರಶ್ಮೀ ಎಸ್.ಆರ್. ಉಪಸ್ಥಿತಿಯಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ರಾಷ್ಟ್ರಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪರಿಷತ್ ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ಕನ್ನಡ ಧ್ವಜಾರೋಹಣ ಮಾಡಿದರು. ಉಮೇಶ್ ಎನ್. ಮೊಡಂಕಾಪು ಮತ್ತು ಪ್ರೇಮಚಂದ್ರ ಪಾಣೆಮಂಗಳೂರು ನಿರ್ವಹಿಸಿದ ಕಾರ್ಯಕ್ರಮವನ್ನು ವಿ.ಸು.ಭಟ್ ನಿರೂಪಿಸಿದರು.

ಇದಾದ ಬಳಿಕ ಪಂಜೆ ಮಂಗೇಶರಾವ್, ಬಿ.ವಿ.ಕಾರಂತ, ಏರ್ಯ ಲಕ್ಷ್ಮೀನಾರಾಯಣ ಆಳ್ವ, ನೀರ್ಪಾಜೆ ಭೀಮ ಭಟ್ಟರ ಭಾವಚಿತ್ರಗಳನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅನಾವರಣ ಮಾಡಿದರು. ದಾನಿಗಳ ನಾಮಫಲಕವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅನಾವರಣ ಮಾಡಿದರು. ಬಂಟ್ವಾಳದ 5 ಕೋಟಿ ಗೆ 3 ಕೋಟಿ ರೂ ಸೇರಿಸಿ ನಿರ್ಮಾಣವಾಗುತ್ತಿರುವ ಪಂಜೆ ಭವನ ಭಾಗಶ:ಕಾಮಗಾರಿ ಪೂರ್ಣಗೊಂಡು ಈಗ ಆರ್ಧಕ್ಕೆ ನಿಂತಿದೆ ಎಂದರು.

ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಾಲೂಕು ಸಮ್ಮೇಳನಗಳ ಅಧ್ಯಕ್ಷರ ಭಾವಚಿತ್ರ ಅನಾವರಣ ಮಾಡಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಕ್ಷಕಲಾವಿದ ಗೋವಿಂದ ಭಟ್ಟರ ಭಾವಚಿತ್ರ ಅನಾವರಣ ನಡೆಯಿತು. ಬಳಿಕ ಅವರನ್ನು ಉದ್ಯಮಿ ಎರ್ಕಳ ರಘುನಾಥ ಸೋಮಯಾಜಿ ಸನ್ಮಾನಿಸಿದರು. ಮಹಮ್ಮದ್ ಯಾಸೀರ್ ಅವರ ಕಲ್ಲಡ್ಕ ಮ್ಯೂಸಿಯಂ ಅನ್ನು ಶೃಂಗೇರಿ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಗೋವಿಂದ ಭಟ್, ಶುದ್ಧ ಕನ್ನಡ ಭಾಷಾ ಪ್ರಯೋಗ ಮಾಡುವ ಯಕ್ಷಗಾನಕ್ಕೆ ಸಾಹಿತ್ಯ ಸಮ್ಮೇಳನಗಳಲ್ಲಿ ಆದ್ಯತೆ ನೀಡಬೇಕು, ಯಕ್ಷಗಾನಕ್ಕೆ ಮನ್ನಣೆ ದೊರಕಬೇಕು ಎಂದರು.

ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿ, ಕೇಮಾರು ಶ್ರೀಗಳು ಮಾತನಾಡಿ, ಕನ್ನಡ ಮತ್ತು ತುಳು ನಮ್ಮ ಉಸಿರಾಗಬೇಕು, ಭಾಷೆಯಿಂದ ಸಂಸ್ಕೃತಿ ಉಳಿಯುತ್ತದೆ , ಜಾತಿ,ಭಾಷೇಗಾಗಿ ಜಗಳ ದೇಶದ ಪ್ರಗತಿಯನ್ನು ಕುಂಠಿಸುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಯುಗಪುರುಷದ ಭುವನಾಭಿಮಾರ ಉಡುಪ, ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಬಿ.ಸಿ.ರೋಡ್ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹರೀಶ ಮಾಂಬಾಡಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಬಸ್ತಿ ವಾಮನ ಶೆಣೈ, ತುಳು ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸ್ವಾಗತ ಸಮಿತಿ ಅಧ್ಯಕ್ಷ ಐತಪ್ಪ ಆಳ್ವ, ಆಳ್ವ,ಕಸಾಪ ಗೌರವ ಕಾರ್ಯದರ್ಶಿ ಡಾ.ನಾಗವೇಣಿ ಮಂಚಿ, ಪ್ರಮುಖರಾದ ಸುದರ್ಶನ ಜೈನ್ ಉಪಸ್ಥಿತರಿದ್ದರು. ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ 20 ವರ್ಷಗಳ ಹಿಂದೆ ಆಗಿನ ತಾಲೂಕು ಕಸಾಪ ಅಧ್ಯಕ್ಷರಾಗಿದ್ದ ನೀರ್ಪಾಜೆ ಭೀಮ ಭಟ್ ಅವರು ಕನ್ನಡಭವನದ ಕನಸನ್ನು ಕಂಡು ಜಮೀನು ಗುರುತಿಸಿ ಶಿಲಾನ್ಯಾಸ ನೆರವೇರಿಸಿದ್ದರು.ಅವರ ಆ ಕನಸು ಕನ್ನಡಭವನ ಲೋಕಾರ್ಪಣೆಯ ಮೂಲಕ ನೆರವೇರಿದೆ ಎಂದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...