Monday, April 15, 2024

ಫೆ.12 ರಿಂದ 17: ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನಃ ನವೀಕರಣ ಬ್ರಹ್ಮಕಲಶೋತ್ಸವ

ಬಂಟ್ವಾಳ : ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನಃ ನವೀಕರಣ, ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ. 12ರಿಂದ 17ರ ವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವದ ಪ್ರಚಾರ-ಮಾಧ್ಯಮ ಸಮಿತಿಯ ಸಂಚಾಲಕ ಮನ್ಮಥ್ ಜೆ.ಶೆಟ್ಟಿ ಪುತ್ತೂರು ಹೇಳಿದರು.

ಅವರು ಸೋಮವಾರ ಕರೆಂಕಿ ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ತಾಮ್ರದ ಹೊದಿಕೆ, ಗರ್ಭಗುಡಿ, ಸುತ್ತುಪೌಳಿಯ ಸಣ್ಣಪುಟ್ಟ ಕೆಲಸಗಳು ಸೇರಿದಂತೆ ಸುಮಾರು ೭೫ ಲಕ್ಷ ರೂ.ಗಳ ಅಭಿವೃದ್ಧಿ ಕಾರ್ಯ ನಡೆದಿದ್ದು, ವಿಜ್ರಂಭಣೆಯ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆದಿದೆ ಎಂದರು.

ಫೆ. ೧೨ರಂದು ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಯೊಂದಿಗೆ ಒಟ್ಟು ಸಂಭ್ರಮಕ್ಕೆ ಚಾಲನೆ ಸಿಗಲಿದೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯಲಿದೆ.

ಫೆ. 17ರಂದು ಬೆಳಗ್ಗೆ ಚಂಡಿಕಾ ಹೋಮ ಪ್ರಾರಂಭಗೊಳ್ಳಲಿದ್ದು, 8.45ರ ಮೀನ ಲಗ್ನದಲ್ಲಿ ಶ್ರೀ ದೇವರ ಪ್ರತಿಷ್ಠೆ, ಪರಿವಾರ ದೇವರ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ.

ಪ್ರತಿದಿನ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ, ಸಾಧ್ವಿ ಶ್ರೀ ಮಾತಾನಂದಮಯಿ, ಕೇಮಾರಿನ ಶ್ರೀ ಈಶ ವಿಠಲದಾಸ ಸ್ವಾಮೀ, ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದು, ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಧರ್ಣಪ್ಪ ಪೂಜಾರಿ ರಾಮನಗರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಚಂದ್ರ ಶೆಟ್ಟಿ ದಂಡೆ, ಉಪಾಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬರಬೈಲು, ಆಡಳಿತ ಸಮಿತಿಯ ಅಧ್ಯಕ್ಷ ನಾರಾಯಣ ಗೌಡ ಕರೆಂಕಿ, ಉಪಾಧ್ಯಕ್ಷ ಪೂವಪ್ಪ ಮೆಂಡನ್ ಕರೆಂಕಿ, ಪ್ರಧಾನ ಕಾರ್ಯದರ್ಶಿ ಮನೋಜ್‌ಕುಮಾರ್ ಕರೆಂಕಿ, ಪ್ರಮುಖರಾದ ದಿನೇಶ್ ಪೂಜಾರಿ ಜ್ಯೋತಿಗುಡ್ಡೆ, ವಿಠಲ ಡಿ, ಸಂತೋಷ್, ಧನರಾಜ್, ಅವಿನಾಶ್, ನಾಗೇಶ್ ಉಪಸ್ಥಿತರಿದ್ದರು.

More from the blog

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...