ಬೆಳ್ತಂಗಡಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಆರ್ಥಿಕ ಸಾಕ್ಷರತಾ ಕೇಂದ್ರ ಅಮೂಲ್ಯ ಇದರ ಪ್ರಾಯೋಜಕತ್ವದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಮಣ್ಣು ಪರೀಕ್ಷೆ ಹಾಗೂ ಬ್ಯಾಂಕ್ ಮಾಹಿತಿ ಕಾರ್ಯಗಾರ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಶಾಲೆ ಮುಖ್ಯೋಪಾಧ್ಯಾಯರಾದ ಪ್ರಕಾಶ್ ನಾಯಕ್ ರವರು ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಈ ಪ್ರದೇಶದ ತಾಲೂಕು ಪಂಚಾಯತ್ ಸದಸ್ಯರಾದ ವಸಂತಿ ಲಕ್ಷ್ಮಣ್ ಅವರು ವಹಿಸಿದ್ದರು ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಹಾಗೂ ಪೋಷಕರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.