Monday, April 15, 2024

ಕೆಡ್ಡಸ ಆಚರಣೆ

ಕಲ್ಲಡ್ಕ:  ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಕೆಡ್ಡಸ ಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ‌ಕಲ್ಲಡ್ಕ ಉಪಸ್ಥಿತಿಯಲ್ಲಿ, ತುಳಸಿ ಕಟ್ಟೆಯ ಮುಂದೆ ಗೋಮಯದಿಂದ ಶುದ್ದೀಕರಿಸಿ ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿದೇವಿಯ ಸಾನಿಧ್ಯ ರಚಿಸಿ , ದೀಪ ಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಪುಡಿ, ಅರಿಸಿನ ಕುಂಕುಮ, ಪಚ್ಚೆಹೆಸರುಪುಡಿ, ವೀಳೆದ್ಯೆಲೆ ಇತ್ಯಾದಿಗಳನ್ನು ಭೂಮಿದೇವಿಯ ಸ್ನಾನಕೋಸ್ಕರಇಟ್ಟು ಹುರುಳಿ, ಹೆಸರು ಕಾಳು, ಒಣ ಕೊಬ್ಬರಿ, ಕಡಲೆ ಕಾಯಿಗಳ ಮಿಶ್ರಣ(ನನ್ಯೆರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷ್ಯಗಳನ್ನು(ಸಾರ್ನಡ್ಡೆ) ಊರಿನ ಹಿರಿಯ ತಾಯಿಯಾದ ಜಯಂತಿ ಹಾಗೂ ಸುಶೀಲ ರವರುಭೂಮಿಗೆ ಎಣ್ಣೆ, ಹಾಲು ಹಾಕಿ ಬಡಿಸಿದರು. ಈ ಸಂದರ್ಭದಲ್ಲಿ ಅಧ್ಯಾಪಕ ವೃಂದದವರು ಸಹಕರಿಸಿದರು.


ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಪ್ರೀತಾರವರು ಕೆಡ್ಡಸದ ಮಹತ್ವವನ್ನು ತಿಳಿಸುತ್ತಾ ತುಳುನಾಡಿನಲ್ಲಿ ವಾರ್ಷಿಕಾ ವರ್ತನದಲ್ಲಿ ಆಚರಣೆಯಾಗುವ ಒಂದು ಹಬ್ಬ. ಕೃಷಿ ಸಂಬಂದಿಯಾಗಿ ಇದರ ಆಚರಣೆಯಾಗುತ್ತದೆ. ಸಮೃದ್ಧಿ ಮತ್ತು ಫಲಾಪೇಕ್ಷೆಯ ಆಶಯದಿಂದ ಇದು ಆಚರಣೆಯಾಗುತ್ತದೆ. ಇದು ತುಳು ತಿಂಗಳ ಪೊನ್ನಿ(ಮಕರ)27ಕ್ಕೆ ಭೂಮಿ ದೊಡ್ಡವಾದಳೆಂಬ ನಂಬಿಕೆ. ಕೆಡ್ಡಸ ಆಚರಣೆಯನ್ನು ಭೂಮಿತಾಯಿಯು ಸಾಮಾನ್ಯ ಸ್ತ್ರೀ ಎಂಬಂತೆ ಪರಿಭಾವಿಸಿದ್ದಾರೆ. ಹೆಣ್ಣಿನಂತೆ ಭೂಮಿಯ ರಜೋಮಯೋವಾಗುತ್ತಾಳೆ ಎಂದುಭಾವಿಸಿ, ಅವಳನ್ನು ಮಡಿಗೊಳಿಸುವ ದಿನವೆಂದು ಈ ಆಚರಣೆಯನ್ನು ನಡೆಸುತ್ತಾರೆ. ಕೆಡ್ಡಸಗಳಲ್ಲಿ ಶುರುಕೆಡ್ಡಸ, ನಡುಕೆಡ್ಡಸ ಮತ್ತು ಕಡೆಕೆಡ್ಡಸ ಎಂದು ಮೂರು ದಿನಗಳ ಕಾಲ ಆಚರಣೆ ಮಾಡುತ್ತಾರೆ. ಕೆಡ್ಡಸದ ಎರಡನೇ ದಿನ ಬೇಟೆ ಸಂಸ್ಕೃತಿಯೂ ಇತ್ತು, ಇದು ಕೃಷಿಯ ಸಂರಕ್ಷಣಾ ವಿಧಾನವಾಗಿದೆ. ತುಳುನಾಡಿನ ಜನರು ಪ್ರಕೃತಿಯ ಆರಾಧಕರಾಗಿರುವುದರಿಂದ ಈ ಆಚರಣೆಯನ್ನು ತಲಾತಲಾಂತರದಿಂದ ಮಾಡಿಕೊಂಡು ಬರಲಾಗಿದೆ. ಈ ಸಮಯದಲ್ಲಿ ಪ್ರಕೃತಿಕೂಡತೆನೆ ಬಿಡಲು ಸಜ್ಜಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಈ ಪದ್ಧತಿ ನೇಪಥ್ಯಕ್ಕೆ ಸರಿದಿರುವುದುಖೇಧಕರ. ಮನೆಮನೆಯಲ್ಲಿಯೂ ಈ ಆಚರಣೆಯಿಂದ ಭೂಮಿಯ ಬಗ್ಗೆ ಗೌರವ ಮೂಡುವುದಲ್ಲದೇ ಹೆಣ್ಣನ್ನು ಭೂಮಿಗೆ ಆರೋಪಿಸುವ ಒಳಾರ್ಥದೊಂದಿಗೆ ಪ್ರತಿಯೊಬ್ಬರು ಪ್ರಕೃತಿಯನ್ನು ಗೌರವಿಸುತ್ತಾನೆ. ಕೆಡ್ಡಸ ಕೇವಲ ಆಚರಣೆ ಮಾತ್ರವಲ್ಲ, ಇದು ಅಧ್ಯಯನ ವಿಷಯವಾಗಿದೆ ಎಂದುಹೇಳಿದರು
ಶಾಲೆಯಲ್ಲಿ ಇಂತಹಆಚರಣೆ ಮಾಡಿರುವಂತದ್ದು ನಿಜವಾಗಿಯೂ ತುಳುನಾಡಿನ ಪದ್ಧತಿ ಉಳಿಸಿದಂತೆ. ವಿದ್ಯಾರ್ಥಿಗಳು ಈ ಆಚರಣೆಯನ್ನು ಮನೆಯಲ್ಲಿಯೂ ಹಿರಿಯರೊಂದಿಗೆಸೇರಿ ಮಾಡುವುದರೊಂದಿಗೆ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಇಂತಹ ಆಚರಣೆಗಳಿಂದ ಆಗಬೇಕು.ಎಂದು ಊರಿನ ಹಿರಿಯ ತಾಯಿಯಾದ ಜಯಂತಿಯವರು ನುಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಕೆಡ್ಡಸದ ವಿಶೇಷತೆ ತಿಳಿಸುವ ಗೀತೆ ಹಾಡಿದರು.ತಬಲದಲ್ಲಿ೬ನೇ ತರಗತಿಯ ಸುಶಾನ್ ಹಾಗೂ ಹಾರ್ಮೋನಿಯಂನಲ್ಲಿ 7 ನೇ ತರಗತಿಯ ದುರ್ಗಾಶರಣ್‌ ಸಹಕರಿಸಿದನು. ಕೆಡ್ಡಸದ ವಿಶೇಷ ತಿನಿಸಾದ ನವವಿಧದ ಧಾನ್ಯಗಳಿಂದ ತಯಾರಿಸಿದ ನನ್ಯೆರಿಯನ್ನು ಅತಿಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹಂಚಲಾಯಿತು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯಕಾರ್ಯದರ್ಶಿಜಯರಾಮ್‌ರೈ, ಊರಿನ ಹಿರಿಯರಾದ ಜಯಂತಿ ಹಾಗೂ ಸುಶೀಲ, ಮಾತೃಭಾರತೀಯ ಸದಸ್ಯರುಹಾಗೂ ಶಾಲಾ ಮುಖ್ಯಶಿಕ್ಷಕರಾದ ರವಿರಾಜ್ ‌ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ವಾಸವಿ ಕೆ ಸಿ ನಿರೂಪಿಸಿ, ಭೂಷಣ್ ಸ್ವಾಗತಿಸಿ, ಚಂದ್ರಕಲಾ ವಂದಿಸಿದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...