Tuesday, April 9, 2024

ಕೊಡಾಜೆ ಗಡಿಸ್ಥಳದಲ್ಲಿ ಫೆ.12 ರಂದು ದೊಂಪದಬಲಿ

ಬಂಟ್ವಾಳ: ಶ್ರೀ ಗುಡ್ಡೆಚಾಮುಂಡಿ ದೈವಸ್ಥಾನ ಗಡಿಸ್ಥಳ- ಕೊಡಾಜೆ, ಮಾಣಿ ಬಂಟ್ವಾಳ ತಾಲೂಕು, ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ ಮಲೆಕೊರತಿ ದೈವಗಳ ದೊಂಪದಬಲಿ ನೇಮ ಫೆ.12 ರಂದು ಶುಕ್ರವಾರ ನಡೆಯಲಿದೆ.

ಆ ಪ್ರಯುಕ್ತ ಫೆ. 9 ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಗೊನೆ ಕಡಿಯುವುದು, ಫೆ.12 ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಾಗತಂಬಿಲ, ಸಂಜೆ 6 ಗಂಟೆಗೆ ಮಾಣಿಗುತ್ತು ಚಾವಡಿಯಿಂದ ಭಂಡಾರ ಹೊರಟು ಗಡಿ ಸ್ಥಳಕ್ಕೆ ಬರುವುದು,ರಾತ್ರಿ 7 ರಿಂದ ಅನ್ನಸಂತರ್ಪಣೆ ಹಾಗೂ ರಾತ್ರಿ 10ರಿಂದ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ ಮಲೆಕೊರತಿ ದೈವಗಳ ದೊಂಪದಬಲಿ ನೇಮ ಕೊಡಾಜೆ ಗಡಿಸ್ಥಳದಲ್ಲಿ ಜರಗಲಿದೆ ಹಾಗೂ ವಿಠಲ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...