ಬಂಟ್ವಾಳ : ಮಾಣಿ ಗ್ರಾಮಪಂಚಾಯತ್ ನ ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಪ್ರೀತಿ ಲ್ಯಾನ್ಸಿ ಪಿರೇರಾ ರವರನ್ನು ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ವತಿಯಿಂದ ಅಭಿಂದಿಸಲಾಯಿತು.
ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನ ಧರ್ಮಗುರು ವಂದನೀಯ ಗ್ರೆಗರಿ ಪಿರೇರಾ ರವರು ಅಭಿನಂದಿಸಿ ಆಶೀರ್ವದಿಸಿದರು. ಚರ್ಚ್ ನ ನಡೆಸುವ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡ ಪ್ರೀತಿಯವರಿಗೆ ದೇವರು ಸಮಾಜ ಸೇವೆಯ ಒಳ್ಳೆಯ ಅವಕಾಶವನ್ನು ನೀಡಿದ್ದಾನೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ದೇವರು, ಸಮಾಜ ಮೆಚ್ಚುವ ಕೆಲಸ ಮಾಡಬೇಕು ಎಂದವರು ಆಶಿಸಿದರು.
ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಪಿರೇರಾ, ಕಾರ್ಯದರ್ಶಿ ಮೇರಿ ಡಿಸೋಜ, ಕಥೋಲಿಕ್ ಸಭಾದ ಅಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಶಿಕ್ಷಕಿ ಐಡಾ ಲಸ್ರಾದೊ, ಕಾನ್ವೆಂಟ್ ಮುಖ್ಯಸ್ಥೆ ಸಿಸ್ಟರ್ ನ್ಯಾನ್ಸಿ, ಸಮಿತಿಯ ಸಂಯೋಜಕರಾದ ಸ್ಟೀವನ್ ಆಲ್ವಿನ್ ಪಾಯಸ್, ಸಂಚಾಲಕರಾದ ಅನಿತಾ ಮಾರ್ಟಿಸ್, ಕಥೋಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಸ್ಥಾಪಕಾಧ್ಯಕ್ಷ ರೋಶನ್ ಬೊನಿಫಾಸ್ ಮಾರ್ಟಿಸ್, ಖಜಾಂಚಿ ಕಿಶೋರ್ ಸಂತೋಷ್ ಪಿಂಟೋ ಉಪಸ್ಥಿತರಿದ್ದರು.