Wednesday, October 18, 2023

*ಬಂಟ್ವಾಳದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ*

Must read

ಬಂಟ್ವಾಳ : ಶರಣು ಧರ್ಮ ಸಂರಕ್ಷಣೆ, ವಚನ ಸಾಹಿತ್ಯದ ರಕ್ಷಣೆಯ ದಂಡ ನಾಯಕತ್ವದ ಜವಾಬ್ದಾರಿ ಹೊತ್ತ ಸಾಹಸಿ ಮಡಿವಾಳ ಮಾಚಿದೇವ.

ಸಾಮಾಜಿಕ ಅಸಮಾನತೆಗಳಿಂದ ತುಳಿತಕ್ಕೆ ಒಳಗಾದ ಜನರ ಪರವಾಗಿ ಸಾಮಾಜಿಕ ಕ್ರಾಂತಿಯನ್ನು ಕೈಗೊಂಡ ಶರಣರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರಾಗಿದ್ದಾರೆ ಎಂದು

ಸೋಮವಾರ ಬಿ ಸಿ ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಮಡಿವಾಳ ಮಾಚಿದೇವ

ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಅವರು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.

More articles

Latest article