Wednesday, April 17, 2024

ಇನ್ಮುಂದೆ ಯಾವುದೇ ಅಂಚೆ ಕಚೇರಿಯಲ್ಲಿ ನಿಮ್ಮ ವಿದ್ಯುತ್‌ ಬಿಲ್‌ ಪಾವತಿ ಮಾಡಲು ಅವಕಾಶ..!

ಮಂಗಳೂರು: ಇನ್ಮುಂದೆ ಯಾವುದೇ ಅಂಚೆ ಕಚೇರಿಯಲ್ಲಿ ನಿಮ್ಮ ವಿದ್ಯುತ್‌ ಬಿಲ್‌ ಪಾವತಿ ಮಾಡಲು ಅವಕಾಶ ಇದೆ. ಹೌದು, ರಾಜ್ಯದ 5 ವಿದ್ಯುತ್‌ ನಿಗಮಗಳಲ್ಲಿರುವ ಗ್ರಾಹಕರು ವಿದ್ಯುತ್‌ ಬಿಲ್‌ಗಳನ್ನು ಇನ್ನು ಮುಂದೆ ಅಂಚೆ ಇಲಾಖೆಯಲ್ಲಿ ಕಟ್ಟುವ ಅವಕಾಶ ಸಿಗಲಿದೆ.

ಈ ಹಿಂದೆ ಆಫ್‌ಲೈನ್‌ ಮೂಲಕ ಮಾತ್ರ ಕಟ್ಟುವ ವ್ಯವಸ್ಥೆ ಇತ್ತು. ಇನ್ನು ಮುಂದೆ ಆನ್‌ಲೈನ್‌ನಲ್ಲಿ ಕಟ್ಟಬಹುದು ಎಂದು ಅಂಚೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೊದಲಿನ ನಿಯಮದಂತೆ ಒಂದು ಊರಿನ ಮೆಸ್ಕಾಂ ವಿಭಾಗಕ್ಕೆ ಸಂಬಂಧ ಪಟ್ಟ ಬಿಲ್‌ಗಳನ್ನು ಅದೇ ತಾಲೂಕಿನಲ್ಲಿ ಅಂಚೆ ವಿಭಾಗದ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬಹುದಾಗಿದ್ದು, ಆದರೆ ಹೊಸ ವ್ಯವಸ್ಥೆಯಲ್ಲಿ ಎಲ್ಲಿ ಬೇಕಾದರೂ ಪಾವತಿ ಮಾಡಬಹುದು.

ಆನ್‌ ಲೈನ್‌ ಸೇವೆಯನ್ನು ಶೀಘ್ರದಲ್ಲೇ ಎಲ್ಲ ಶಾಖಾ ಅಂಚೆ ಕಚೇರಿಗಳಲ್ಲೂ ಪ್ರಾರಂಭಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...