ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕಲಶಾಭಿಶೇಕದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ದ.ಕ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ದೇಗುಲದ ಇತಿಹಾಸವನ್ನು ಜಿಲ್ಲಾಧಿಕಾರಿಯವರಿಗೆ ವಿವರಿಸಿ ಕ್ಷೇತ್ರದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಸ್ಮರಣಿಕೆ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಮಂಜಯ್ಯ ಶೆಟ್ಟಿ.ಚೇರಾ ಸೂರ್ಯನಾರಾಯಣ ರಾವ್.ಕೃಷ್ಣರಾಜ್ ಮಾರ್ಲ ಮುತ್ತೂರು.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಗಿರಿಪ್ರಕಾಶ್ ತಂತ್ರಿ.ಕಾರ್ಯನಿರ್ವಹಣಾಧಿಕಾರಿ ಜಯಮ್ಮ.ಪ್ರಮುಖರಾದ ಸುಕೇಶ್ ಚೌಟ.ಪವನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.