ಪುಂಜಾಲಕಟ್ಟೆ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುಂಜಾಲಕಟ್ಟೆ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಂಜಿತ್ ಇವರು ನೆರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಗಣಪತಿ ಕುಳಮರ್ವ ಇವರು ವಹಿಸಿ ಕ್ರೀಡೆಯು ಜಗತ್ತಿನ ಜೀವನ ಕೌಶಲ್ಯ ಮತ್ತು ಸಾಮಾಜೀಕರಣದ ಅತ್ಯಂತ ಪ್ರಬಲ ಮಾಧ್ಯಮವಾಗಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ಪ್ರಸಾದ್ ನಾಯಕ ಹಾಗೂ ಕಾಲೇಜಿನ ಕ್ರೀಡಾಂಗಣ ನಿರ್ಮಿಸಲು ಬೆನ್ನೆಲುಬಾಗಿದ್ದ ಸ್ಥಳೀಯ ಉದ್ಯಮಿಗಳಾದ ಶ್ರೀ ಅನಿಲ್ ಡೇಸಾಡೆ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕಿಶೋರ್ ಕುಮಾರ್ c k ಇವರು ಭಾಗವಹಿಸಿದ್ದರು. ವಿಶ್ವವಿದ್ಯಾನಿಲಯದ ವೀಕ್ಷಕರಾಗಿ ಪ್ರೊ ರವಿಶಂಕರ್ ವಿ ಎಸ್ ಇವರು ಭಾಗವಹಿಸಿದ್ದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಹಳ್ಳಿಮನೆ ಹೈದರಾಲಿ, ನಿವೃತ್ತ ದೈಹಿಕ ಶಿಕ್ಷಕರು, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಶ್ರೀ ರಮೇಶ್ ಮೂಲ್ಯ, ಶ್ರೀಮತಿ ಶಶಿಪ್ರಭ ,ಅಧ್ಯಕ್ಷರು, ಮಡಂತ್ಯಾರು ಗ್ರಾಮ ಪಂಚಾಯತ್, ಉಪಾಧ್ಯಕ್ಷರಾದ ಶ್ರೀಮತಿ ಸಂಗೀತ ಶೆಟ್ಟಿ, ನಿವೃತ್ತ ಸೈನಿಕರು ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಕಾಂತಪ್ಪ ಗೌಡ, ಶಿಕ್ಷಕ ರಕ್ಷಕ ಸಂಘದ ಮಾಜಿ ಸದಸ್ಯರಾದ ಶ್ರೀ ರಾಜಶೇಖರ್ ಶೆಟ್ಟಿ, ರೋಟರಿ ಸ್ಥಾಪಕ ಅಧ್ಯಕ್ಷರಾದ ಮೋಹನ್ ಕಂಡೆ ತ್ತಿ ಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಮೋಹನ್ ಹೆಗಡೆ ಬೆಟ್ಟು,ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಉಪಸ್ಥಿತರಿದ್ದರು.
ಪುರುಷರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲೆಯ ಪ್ರತಿಷ್ಠಿತ 10 ತಂಡಗಳು ಭಾಗವಹಿಸಿದ್ದವು ಅದರಲ್ಲಿ ಪ್ರಥಮ ಸ್ಥಾನವನ್ನು ರೋಶಿನಿ ನಿಲಯ ಕಾಲೇಜು ಮಂಗಳೂರು,ದ್ವಿತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ,sdpt ಕಟೀಲು ತೃತೀಯ ಹಾಗೂ ಪುಂಜಾಲಕಟ್ಟೆ ಕಾಲೇಜು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು. ಈ ಕಾರ್ಯಕ್ರಮವನ್ನು ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ದೇವರನ್ನು ಸ್ಮರಿಸುವುದರ ಮೂಲಕಕಾರ್ಯಕ್ರಮವನ್ನು ಪ್ರಾರಂಭಿಸಿದರು ಶ್ರೀ ರವಿಶಂಕರ್ ಬಿ ಇವರು ಸ್ವಾಗತಿಸಿ ಡಾ. ವಿಶಾಲ್ ಪಿಂಟೋ ಇವರು ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು.