ಬಂಟ್ವಾಳ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜೇಶ್ ರಸ್ತೆ ಸುರಕ್ಷತೆ ವಿಷಯದ ಕುರಿತಾಗಿ ಮತ್ತು ‘ಸಾಮಾಜಿಕ ಜಾಲತಾಣದ ಅರಿವು ಮತ್ತು ಎಚ್ಚರಿಕೆ’ ವಿಷಯದ ಕುರಿತಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಅವಿನಾಶ್ ಇವರು ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ನಾಗೇಶ್ ಇರಾ ಹಾಗೂ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣ ಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಗಂಧರ್ವ ಸ್ವಾಗತಿಸಿ ಶುಭಲತಾ ಕಾರ್ಯಕ್ರಮ ನಿರೂಪಿಸಿದರು.