Wednesday, April 10, 2024

ರಸ್ತೆ ಸುರಕ್ಷತಾ ನಿಯಮ ಪಾಲಿಸಿ – ಡಾ|| ಚೂಂತಾರು

ಪ್ರತೀ ವರ್ಷ ನಮ್ಮ ದೇಶದಲ್ಲಿ ಸುಮಾರು 1.5 ಲಕ್ಷ ಮಂದಿ ರಸ್ತೆ ಅಪಘಾತಗಳಿಂದ ಜೀವ ಕಳೆದುಕೊಳ್ಳುತ್ತಾರೆ. ಪ್ರತೀ ಮೂರು ನಿಮಿಷಕ್ಕೆ ಒಬ್ಬರು ರಸ್ತೆ ಅಪಘಾತದಿಂದ ಸಾಯುತ್ತಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳನ್ನು ಬಿಗಿಗೊಳಿಸಿ ಜನರು ಸರಿಯಾಗಿ ಪಾಲಿಸಿದಲ್ಲಿ ಈ ಸಾವು ನೋವಿನ ಪ್ರಮಾಣ ತಗ್ಗಿಸಬಹುದು. 2020 ರಲ್ಲಿ ರಸ್ತೆ ನಿಯಮದ ಪರಿಷ್ಕರಣೆಯಿಂದ ಜನರ ಸಾವು ನೋವಿನ ಸಂಖ್ಯೆ ಕಡಿಮೆಯಾಗಿರುವುದು ಸಂತಸಕರ ವಿಚಾರ. ಈ ನಿಟ್ಟಿನಲ್ಲಿ ನಾವು ಇನ್ನೂ ಹೆಚ್ಚು ಜಾಗೃತರಾಗಿ ಜೀವ ಹಾನಿ ತಪ್ಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.

ನವಯುವ ಟೋಲ್, ತಲಪಾಡಿ ಇವರ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತಾ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉಳ್ಳಾಲ ಠಾಣಾ ಸಬ್‌ಇನ್ಸ್‌ಪೆಕ್ಟರ್  ರೇವಣಸಿದ್ದ ಅವರು ರಸ್ತೆ ಸುರಕ್ಷಾ ಅಭಿಯಾನವನ್ನು ಉದ್ಘಾಟಿಸಿ, ಜನರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ನುಡಿದರು. ರಾಷ್ರೀಯ ಹೆದ್ದಾರಿ ಪ್ರಾಧಿಕಾರ ಇದರ ಹಿರಿಯ ಅಧಿಕಾರಿ  ಶಿಶುಮೋಹನ್ ಮಾತನಾಡಿ ರಸ್ತೆ ಸುರಕ್ಷತಾ ನಿಯಮಗಳು ಜನರಿಗಾಗಿ ಸರಕಾರ ಮಾಡಿದ ವ್ಯವಸ್ಥೆಯಾಗಿದ್ದು, ಎಲ್ಲರೂ ಪಾಲಿಸಿದರೆ ಸುಂದರ ಸಮಾಜ ನಿರ್ಮಾಣವಾಗಬಹುದು ಎಂದರು. ಪ್ರಸಾದ ನೇತ್ರಾಲಯದ  ಸಿದ್ದಾರ್ಥ್ ಶೆಟ್ಟಿ ಉಪಸ್ಥಿತರಿದ್ದರು. ನವಯುಗ ಸಂಸ್ಥೆಯ ಪ್ರಬಂಧಕರಾದ ಮತ್ತು ಶಿವಪ್ರಸಾದ್ ಪುತ್ತಿಗೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಚಾಲಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...