ದಕ್ಷಿಣ ಕನ್ನಡ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಇಂದು ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಡೆಯಿತು.
ಈ ಸಭೆಯಲ್ಲಿ ಶಾಸಕರುಗಳಾದ ವೇದವ್ಯಾಸ್ ಕಾಮತ್, ಡಾ.ವೈ ಭರತ್ ಶೆಟ್ಟಿ, ರಾಜೇಶ್ ನಾಯಕ್ ಉಳಿಪ್ಪಾಡಿ, ಉಮಾನಾಥ್ ಕೋಟ್ಯಾನ್, ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮ.ನ.ಪಾ ಮೇಯರ್ ದಿವಾಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.