Friday, April 5, 2024

ತುಳುವಿಗೆ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಕೊರತೆ ನಿಭಾಯಿಸುವ ಕಾರ್ಯವಾಗಬೇಕು: ಒಡಿಯೂರು ಶ್ರೀ

ವಿಟ್ಲ: ತುಳುವಿಗೆ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಕೊರತೆ ನಿಭಾಯಿಸುವ ಕಾರ್ಯವಾಗಬೇಕು. ಕೃಷಿ – ಋಷಿ ಸಂಸ್ಕೃತಿಯ ಎರಜು ಕಣ್ಣುಗಳಿದ್ದಂತೆ. ನಿರಂತರ ಪ್ರಯತ್ನ ಇದ್ದಾಗ ತುಳು ಭಾಷೆಗೆ ಮಾನ್ಯತೆ ದೊರೆಯುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಇರುವತ್ತೊಂಜನೇ ಐನಿರೊ ತುಳು ಸಾಹಿತ್ಯ ಸಮ್ಮೇಳನೊ ಸಮಾರೋಪದಲ್ಲಿ ಆಶೀರ್ವಚನ ನೀಡಿದರು.

ಸಮ್ಮೇಳನ ಅಧ್ಯಕ್ಷ ಹಿರಿಯ ಕವಿ, ಸಾಹಿತಿ ಮಲಾರು ಜಯರಾಮ ರೈ ಮಾತನಾಡಿ ಮಾತೃ ಭಾಷೆಯಾಗಿ ತುಳುವನ್ನು ಹೇಳಿಕೊಳ್ಳಲು ಹಿಂಜರಿಕೆ ಸರಿಯಲ್ಲ. 1ಕೋಟಿ ತುಳುವರು ಇದ್ದರೂ ತುಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗದಿರುವುದು ಬಹುದು ದೊಡ್ಡ ಹಿನ್ನಡೆ. ತುಳುವಿಗೆ ಶಕ್ತಿ ಸಾಮರ್ಥ್ಯವಿದ್ದರೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯಿಂದ ನಿರ್ಲಕ್ಷ್ಯತೆಗೊಳಗಾಯಿತು ಎಂದು ತಿಳಿಸಿದರು.

ತುಳುವಿನ ವಿಚಾರದಲ್ಲಿ ಸಾಧನೆ ಮಾಡಿದ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು, ಜಿ. ವಿ. ಎಸ್. ಉಳ್ಳಾಲ, ಎಸ್. ಆರ್. ಬಂಡಿಮಾರ್ ಅವರಿಗೆ ತುಳು ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಾಧ್ವಿ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿದ್ದರು. ಸುಳ್ಯ ದುಗ್ಗಲಡ್ಕ ಕುರಲ್ ತುಳುಕೂಟ ಸಂಚಾಲಕ ಕೆ. ಟಿ. ವಿಶ್ವನಾಥ, ತುಳು ಸಾಹಿತ್ಯ ಸಮ್ಮೇಳನ ಸಮಿತಿ ಸಂಚಾಲಕ ಡಾ. ವಸಂತ ಕುಮಾರ್ ಪೆರ್ಲ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ಒಡಿಯೂರು ಶ್ರೀಗುರುದೇವ ಗ್ರಾಮ ವಿಕಾಸ ಯೋಜನೆ ಮೇಲ್ವಿಚಾರಕ ಯಶೋಧರ ಸಾಲ್ಯಾನ್ ಸ್ವಾಗತಿಸಿದರು. ಶಿಕ್ಷಕಿ ಸವಿತಾ, ಗ್ರಾಮ ಸಂಯೋಜಕಿ ಲೀಲಾ, ಸೇವಾ ದೀಕ್ಷಿತೆ ಪುಷ್ಪಾ ಪುಣಚ ಸನ್ಮಾನ ಪತ್ರ ವಾಚಿಸಿದರು. ಮಾತೇಶ್ ಭಂಡಾರಿ ವಂದಿಸಿದರು. ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಮುಖ್ಯ ಶಿಕ್ಷಕ ಜಯಲಕ್ಷ್ಮಿ ಶೆಟ್ಟಿ ಎ. ಕಾರ್ಯಕ್ರಮ ನಿರೂಪಿಸಿದರು.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.