Saturday, April 13, 2024

ನಂದಾವರ: 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಶಾಸಕ ರಾಜೇಶ್ ನಾಯ್ಕ್ ಶಿಲಾನ್ಯಾಸ

ಬಂಟ್ವಾಳ: ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ಕಟ್ಲೆಮಾರ್‌ನಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಪ್ರಸ್ತುತ ಈ ಅಂಗನವಾಡಿ ಕೇಂದ್ರ ಸ್ಥಳವು ಸಾಕಷ್ಟು ಕಿರಿದಾಗಿದ್ದು, ರಸ್ತೆಗೆ ತಾಗಿಕೊಂಡಿದೆ. ಇಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಗೊಂಡಲ್ಲಿ ಮುಂದೆ ರಸ್ತೆ ವಿಸ್ತರಣೆಗೆ ತೊಂದರೆಯಾಗಲಿದೆ. ಹೀಗಾಗಿ ಗ್ರಾ.ಪಂ.ನವರು ಶೀಘ್ರದಲ್ಲಿ ಬೇರೆ ಸ್ಥಳ ಗುರುತಿಸಿದರೆ ಅನುಕೂಲವಾಗಲಿದೆ ಎಂದರು.

ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರವೀಂದ್ರ ಕಂಬಳಿ, ಬಂಟ್ವಾಳ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ನಸೀಮಾ ಬೇಗಂ, ಲೋಕೋಪಯೋಗಿ ಇಲಾಖೆಯ ಎಇಇ ಷಣ್ಮುಗಂ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮಹಮ್ಮದ್, ಗುತ್ತಿಗೆದಾರ ಗಿರೀಶ್, ಗ್ರಾ.ಪಂ.ಸದಸ್ಯರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಽಕಾರಿ ಗಾಯತ್ರಿ ಕಂಬಳಿ ಸ್ವಾಗತಿಸಿದರು. ಹಿರಿಯ ಮೇಲ್ವಿಚಾರಕಿ ಭಾರತಿ ಬೇಬಿ ಕುಂದರ್ ವಂದಿಸಿದರು

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...