ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ನಗರದ ಶಾರದಾ ವಿದ್ಯಾಲಯದಲ್ಲಿ ದ.ಕ. ಜಿಲ್ಲಾ ಮಟ್ಟದ 24ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಪುಂಜಾಲಕಟ್ಟೆ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
1980ರಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪನೆ ಮಾಡಿ 1984 ರಲ್ಲಿ ಸಂಘವನ್ನು ರಿಜಿಸ್ಟರ್ ಮಾಡಿಸಿ ಸಾಮಾಜಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಪುಂಜಾಲಕಟ್ಟೆ 2009 ರಿಂದ 2020ರ ವರೆಗೆ 350 ಜತೆ ಬಡ ಬಂಧುಗಳು ವಿಜೃಂಭಣೆಯಿಂದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಗೃಹಸ್ಥಾಶ್ರಮ ಪ್ರವೇಶ ಮಾಡಿದ್ದಾರೆ.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪುಂಜಾಲ್‌ಕಟ್ಟೆ ಅವರು ಸನ್ಮಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷ ತುಂಗಪ್ಪ ಬಂಗೇರ, ಕಾರ್ಯದರ್ಶಿ ಜಯರಾಜ್ ಅತ್ತಾಜೆ, ಸಂಚಾಲಕರು ರಾಜೇಶ್ ಪುಳಿಮಜಲು ಉಪಸ್ಥಿತರಿದ್ದರು.
ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 50 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು.