ಬಂಟ್ವಾಳ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಮಾ.7ರಂದು ಶಾಲೆಯಲ್ಲಿ ನಡೆಯಲಿದೆ. 60ವರ್ಷಗಳ ಹಿಂದೆ ಸ್ಥಾಪನೆಗೊಂಡ ಇಲ್ಲಿನ ಸರಕಾರಿ ಪ್ರೌಢ ಶಾಲೆ ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಅಭಿವೃದ್ಧಿ ಹೊಂದಿದ್ದು, ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ.
ಶಾಲೆಯ ಪ್ರಗತಿ ಚಿಂತನೆಗಾಗಿ ಇಲ್ಲಿನ ಹಳೆ ವಿದ್ಯಾರ್ಥಿ ಸಂಘವನ್ನು ಪುನರ್‌ರಚಿಸಲು ಹಳೆ ವಿದ್ಯಾರ್ಥಿಗಳ ಸಂಘದ ಸಭೆ, ಸಮ್ಮಿಲನ ಕಾರ್ಯಕ್ರಮ ಶಾಲೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಸಂಘಟನೆಯ ವೃದ್ಧಿಗಾಗಿ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕಾಗಿ ಸಂಘದ ಅಧ್ಯಕ್ಷ ಡಾ. ಹರ್ಷ ಸಂಪಿಗೆತ್ತಾಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.