ಬಂಟ್ವಾಳ: ಭೂಯಾ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ವತಿಯಿಂದ ಇತ್ತೀಚೆಗೆ ಆಲಡ್ಕ ಮೈದಾನದಲ್ಲಿ ನಡೆದ ಆಲಡ್ಕ ಪ್ರೀಮಿಯರ್ ಲೀಗ್ (ಎಪಿಎಲ್) ಸೀಸನ್-5 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಪದಕ ವಿಜೇತ ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ್, ಕೊರೋನಾ ವಾರಿಯರ್ಸ್‍ಗಳಾದ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಸ್ಥಳೀಯ ವೈದ್ಯರುಗಳಾದ ಡಾ ಎಂ ಎಂ ಶರೀಫ್ ಆಲಡ್ಕ, ಡಾ ರಾಜೇಂದ್ರ ಪಡಿಯಾರ್ ಪಾಣೆಮಂಗಳೂರು ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಬಂಟ್ವಾಳ ತಾ ಪಂ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಭೂಯಾ ಕ್ಲಬ್ ಅಧ್ಯಕ್ಷ ಶರೀಫ್ ಭೂಯಾ, ಹಕೀಂ ಉಲ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.