ಕಲ್ಲಡ್ಕ: ಮಾ.09: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಚೆಸ್ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಸಮಗ್ರ ತಂಡ ಪ್ರಶಸ್ತಿ ಪಡೆದಿದ್ದು ರಕ್ಷಾ ಕುಮಾರಿ ದ್ವಿತೀಯ ವಿಜ್ಞಾನ ವಿಭಾಗ, ಯಶಸ್ವಿ ದ್ವಿತೀಯ ವಾಣಿಜ್ಯ ವಿಭಾಗ, ಅಮೃತಾ ಪ್ರಥಮ ವಿಜ್ಞಾನ ವಿಭಾಗ ಇವರು ಕ್ರಮವಾಗಿ ದ್ವಿತೀಯ, ತೃತೀಯ ಹಾಗೂ ಐದನೇ ಸ್ಥಾನ ಗಳಿಸಿ ರಾಜ್ಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.