ಬಂಟ್ವಾಳ: ದ.ಕ.ಜಿ.ಪಂ. ಸದಸ್ಯ, ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ2020ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಮಾ.7ರಂದು ನಡೆದ ಗೌರವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಸಾಮಾಜಿಕ, ಶೈಕ್ಷಣಿಕ, ಸಾಂಸ್ಕ ತಿಕ ಧಾರ್ಮಿಕ , ಕ್ರೀಡಾ, ಜಾನಪದ ಕ್ಷೇತ್ರದಲ್ಲಿ ಅಸಾಧಾರಣ ಇಚ್ಛಾಶಕ್ತಿಯಿಂದ ತುಳುನಾಡಿನಲ್ಲಿ ಸಮಾಜ ಸೇವೆಗೈಯ್ಯುತ್ತಿರುವ, ಕಳೆದ 13 ವರ್ಷಗಳಿಂದ ಸಾಮೂಹಿಕ ವಿವಾಹ ಸಮಾರಂಭದ ಮೂಲಕ 450ಕ್ಕೂ ಮಿಕ್ಕಿ ಅರ್ಹ ಬಡವರಿಗೆ ಕಂಕಣ ಭಾಗ್ಯವನ್ನು ನೀಡಿದ ಎಂ.ತುಂಗಪ್ಪ ಬಂಗೇರ ಅವರಿಗೆ ಈ ಪ್ರಶಸ್ತಿ ಸಂದಾಯವಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಮೀನುಗಾರಿಕಾ ಸಚಿವ ಎಸ್. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಡಾ. ಪ್ರಭಾಕರ ಭಟ್ ಕಲ್ಲಡ್ಕ, ರಾಜ್ಯ ಸಭಾ ಸದಸ್ಯ ನಾರಾಯಣ,ಕರಾವಳಿ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ.ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.