ಬಂಟ್ವಾಳ: ಮಾ.12 ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಚಾಲಕನ ನಿಯಂತ್ರಣ ಕಳೆದು ಲಾರಿ ರಸ್ತೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ.
ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಬ್ಬಿಣದ ರಾಡ್ ಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಚಾರಕ್ಕೆ ಅಣಚಣೆ ಉಂಟಾಗಿದೆ.