Wednesday, April 17, 2024

ಪ್ರವಾಸಿಗರ ರಕ್ಷಣೆಗೆ ನಮ್ಮ ಆದ್ಯತೆ : ಡಾ|| ಚೂಂತಾರು

ಬಂಟ್ವಾಳ: ಮಾ.15ದ.ಕ ಜಿಲ್ಲೆ ತನ್ನ ಮನಮೋಹಕ ಬೀಚ್‌ನಿಂದಾಗಿ ಬಹಳಷ್ಟು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಇಂತಹ ಬೀಚ್‌ಗಳಲ್ಲಿ ಪ್ರವಾಸಿಗಳು ಮೈಮರೆತು ಜೀವಕ್ಕೆ ಅಪಾಯ ಆಹ್ವಾನಿಸಿಕೊಳ್ಳುತ್ತಾರೆ. ಇಂತಹಾ ಸಂದರ್ಭದಲ್ಲಿ ಪ್ರವಾಸಿಗರನ್ನು ಎಚ್ಚರಿಸಿ ರಕ್ಷಿಸುವ ಹೊಣೆಗಾರಿಕೆ ಜಿಲ್ಲಾ ಗೃಹರಕ್ಷಕ ಮತ್ತು ಪೌರರಕ್ಷಣಾ ತಂಡಕ್ಕೆ ಇದೆ. ಮಾನ್ಯ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ದ.ಕ ಜಿಲ್ಲಾ ಗೃಹರಕ್ಷಕದಳ ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದು, ಬೀಚ್‌ಗಳಿಗೆ ಬರುವ ಎಲ್ಲಾ ಪ್ರವಾಸಿಗರ ರಕ್ಷಣೆಗೆ ಕಟಿಬದ್ಧವಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.


ಮಾ.14ಭಾನುವಾರದಂದು ಉಳ್ಳಾಲ ಬೀಚ್‌ನಲ್ಲಿ ಸಂಜೆ ಹೊತ್ತು ಹಾಸನದ ವ್ಯಕ್ತಿ ತನ್ನ ಮಗಳೊಂದಿಗೆ ಆಟವಾಡುತ್ತಿದ್ದಾಗ ದೊಡ್ಡ ಅಲೆಯೊಂದು 4 ವರ್ಷದ ಬಾಲಕಿಯನ್ನು ತನ್ನಡೆ ಸೆಳೆದುಕೊಂಡಿತ್ತು. ಅಲ್ಲೇ ಸಮುದ್ರತೀರದಲ್ಲಿ ಇದನ್ನು ಗಮನಿಸುತ್ತಿದ್ದ ಉಳ್ಳಾಲ ಗೃಹರಕ್ಷಕ ದಳದ ಗೃಹರಕ್ಷಕ ಪ್ರಸಾದ್ ಸುವರ್ಣ ಅವರು ತನ್ನ ಜೀವದ ಹಂಗನ್ನು ತೊರೆದು ಸಮುದ್ರಕ್ಕೆ ಹಾರಿ ಮಗುವನ್ನು ರಕ್ಷಿಸಿ ಪ್ರಸಾಂಗಾವಧಾನತೆ ಮೆರೆದಿದ್ದಾರೆ. ಅವರ ಈ ಕಾರ್ಯವನ್ನು ಮೆಚ್ಚಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ವತಿಯಿಂದ ಮಾ.15ಸೋಮವಾರದಂದು ನಗರದ ಮೇರಿಹಿಲ್‌ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ಅವರು ಫಲಪುಷ್ಪ ನೀಡಿ, ಹಾರ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಅವರ ಹೆಸರನ್ನು ವಿಶೇಷ ನಗದು ಬಹುಮಾನಕ್ಕೆ ಆರಕ್ಷಕ ಮಹಾನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ ಬೆಂಗಳೂರು ಅವರ ಕಛೇರಿಗೆ ಶಿಫಾರಸು ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಛೇರಿ ಅಧೀಕ್ಷಕರಾದ ರತ್ನಾಕರ್, ಉಳ್ಳಾಲ ಘಟಕದ ಗೃಹರಕ್ಷಕರಾದ ಸುನಿಲ್ ಕುಮಾರ್, ಸುನಿಲ್ ಪೂಜಾರಿ, ದಿವ್ಯ ಪೂಜಾರಿ, ದಿವಾಕರ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

More from the blog

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...