Tuesday, April 9, 2024

ಮರ ಕಡಿಯುವಾಗ ಮೈಮೇಲೆ ಮರಬಿದ್ದು ಮೂವರು ಸಾವು

ಬೆಳ್ತಂಗಡಿ: ಬೆಳ್ತಂಗಡಿಯ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ  ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ  ನಡೆದಿದೆ.

ಮಧ್ಯಾಹ್ನದ ವೇಳೆ ಮರ ತುಂಡರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ (21 ವ), ಸೇಸಪ್ಪ ಪೂಜಾರಿ ಅವರ ಪುತ್ರ ಸ್ವಸ್ತಿಕ್ (23 ವ) ಮತ್ತೋರ್ವ ಸುರೇಶ್ ಎಂದು ತಿಳಿದುಬಂದಿದೆ.

ಅನಾರು ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರವನ್ನು ಕಡಿದು ಉರುಳಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್, ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...