ಬಂಟ್ವಾಳ: ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಎಲ್ಲಾ ಘಟಕಗಳಿಗೆ ಭೇಟಿ ನೀಡಿದ ಸಚಿವರು ವ್ಯವಸ್ಥೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಪತ್ರಕರ್ತರ ಜತೆ ಮಾತನಾಡಿ, ಬಂಟ್ವಾಳದ ಪುಂಜಾಲಕಟ್ಟೆ ಆಸ್ಪತ್ರೆಯನ್ನು 6 ಕೋ.ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಆಸ್ಪತ್ರೆಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಶೀಘ್ರದಲ್ಲಿ ಡಿಗ್ರೂಪ್ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಜತೆಗಿದ್ದು, ಆಸ್ಪತ್ರೆಯ ವ್ಯವಸ್ಥೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ಪುರಸಭಾ ಸದಸ್ಯ ಗೋವಿಂದ ಪ್ರಭು, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ಮೊದಲಾದವರಿದ್ದರು.