Wednesday, April 10, 2024

ಬಂಟ್ವಾಳದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ

ಬಂಟ್ವಾಳ : ಕೊರೊನಾ ಜಾಗೃತಿ ಕಾರ್ಯಕ್ರಮ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಮಂಗಳವಾರ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಕೊರೊನದ ಒಂದನೇ ಆಲೆ ಕಡಿಮೆಯಾಗಿ‌ ಎರಡನೇ‌ ಅಲೆ‌ ಪ್ರಾರಂಭವಾಗಿದ್ದು ಈಗಾಗಲೇ ರಚಿಸಿರುವ ಟಾಸ್ಕ್ ಫೋರ್ಸ್ ಸಮಿತಿಗಳು ಇನ್ನು ಮುಂದೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಬಂಟ್ವಾಳ ತಾಲ್ಲೂಕು ಗಡಿ ಭಾಗದ ಪ್ರದೇಶಗಳನ್ನು ಒಳಗೊಂಡಿರುವುದರಿಂದ ಹೆಚ್ಚು ನಿಗಾ ವಹಿಸಬೇಕು.

ಹೊರ ದೇಶಗಳಿಂದ ಬರುವ ಪ್ರಯಾಣಿಕರು ಇರುವ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ತಾಲೂಕು ಕಚೇರಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಮಾತನಾಡಿ 60 ವರ್ಷ‌ ಮೇಲ್ಪಟ್ಟವರು ಮತ್ತು 45 ವರ್ಷದಿಂದ 59 ವರ್ಷದೊಳಗಿನ ಇತರ ಕಾಯಿಲೆಯಿಂದ ಬಳಲುತ್ತಿರುವವರು ಭಯ ಪಡದೆ ಕೋವಿಡ್ ಲಸಿಕೆ ಪಡೆದು ಕೊಳ್ಳುವಂತೆ ಹೇಳಿದರು.ಕೊರನಾದಿಂದ‌ ಲಾಕ್ ಡೌನ್ ಆಗದ ರೀತಿಯಲ್ಲಿ ಈಗಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕೊರೊನದ ಮುಂಜಾಗ್ರತೆಯ ಬಗ್ಗೆ  ಮಾಹಿತಿ ನೀಡಿದರು.

ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ತಾಲ್ಲೂಕು ಕಛೇರಿಯ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ‌ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...