ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದಕ್ಕೆ ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜ್ ನೇತೃತ್ವದಲ್ಲಿ ದಾಳಿ ಓರ್ವನ ಬಂಧನ .
ಬಿ.ಕಸ್ಬಾ ಗ್ರಾಮದ ಮಂಡಾಡಿ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸರು ಮೂಡನಡುಗೋಡು ಗ್ರಾಮದ ಮಜಲೋಡಿ ನಿವಾಸಿ ಸತೀಶ್ ಕುಮಾರ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು , ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ.
ದಾಳಿಯ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಸಜೀಪ ಕಾರಾಜೆ ನಿವಾಸಿ ಪ್ರದೀಪ್ ಕುಮಾರ್ ಪರಾರಿಯಾಗಿದ್ದಾನೆ.ಆತನ ಬಂಧನಕ್ಕಾಗಿ ಪೋಲೀಸರು ಬಲೆ ಬೀಸಿದ್ದಾರೆ.
ಸತೀಶ್ ಎಂಬಾತ ಮಂಡಾಡಿಯಲ್ಲಿ ಬಾಡಿಗೆ ಮನೆ ತಗೊಂಡು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ.
ದಾಳಿಯ ವೇಳೆ ಮನೆಯಲ್ಲಿದ್ದ ಸುಮಾರು ಆರು ಸಾವಿರ ರೂ ನಗದು ಹಾಗೂ ಕೆಲವೊಂದು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ನೇತೃತ್ವದಲ್ಲಿ ಅಪರಾಧ ವಿಭಾಗದ ಎಸ್‌ಐ. ಕಲೈಮಾರ್, ಎ.ಎಸ್.ಐ ಜಯರಾಮ್ ರೈ, ಪಿ.ಸಿ.ಗಳಾದ ಉಸ್ಮಾನ್ ,ಹಾಲೇಶ್, ಕುಮಾರ್, ಡಬ್ಲ್ಯು. ಪಿ.ಸಿ.ಧನ್ಯಶ್ರೀ ಕಾರ್ಯಚರಣೆ ನಡೆಸಿದ್ದರು.