ಬಂಟ್ವಾಳ: ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮರದಿಂದ ಕೆಲಕ್ಕೆ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ.
ಮಣಿನಾಲ್ಕೂರು ಗ್ರಾಮದ ಮಿನಾಲ್ದೊಟ್ಟು ನಿವಾಸಿ ಅಶೋಕ್ (35) ಅವರು ಮೃತಪಟ್ಟ ವ್ಯಕ್ತಿ.
ಇವರು ಫೆ.7 ರಂದು ಬೆಳಿಗ್ಗೆ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರದ ಗೆಲ್ಲು ಕಡಿಯುವ ಉದ್ದೇಶದಿಂದ ಮರಕ್ಕೆ ಹತ್ತಿದ್ದರು.
ಆದರೆ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ಕೂಡಲೇ ತುಂಬೆ ಹಾಗೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಶೋಕ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು (ಮಾ.3)ಮಧ್ಯಾಹ್ನ ಮೃತಪಟ್ಟಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದೆ.